ಬೆಂಗಳೂರು, ಜೂನ್, 9, 2025 (www.justkannada.in): ರೈತರ ಕೃಷಿ ಪಂಪ್ಸೆಟ್ ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಜೆ ಜಾರ್ಜ್ ಅವರು, “ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ,” ಎಂದರು.
“ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್ ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್ ಗಳ ಮೂಲಕ ರೈತರ ಕೃಷಿ ಪಂಪ್ ಸೆಟ್ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್ ಫರ್ಮರ್ಗಳ ಮೇಲಿನ ಹೊರೆಯೂ ಇದರಿಂದ ತಗ್ಗುತ್ತದೆ,” ಎಂದು ಹೇಳಿದರು.
“ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ. ಇಲ್ಲಿ ಖಾಸಗಿ ಜಮೀನನ್ನು 25 ವರ್ಷಕ್ಕೆ ಭೋಗ್ಯಕ್ಕೆ ಪಡೆಯಲಾಗಿದೆ,” ಎಂದು ವಿವರಿಸಿದರು.
ನಮ್ಮ ಸರ್ಕಾರ ಬಂದ ಮೇಲೆ ಕುಸುಮ್-ಸಿ ಜಾರಿ:
“ಕುಸುಮ್ – ಸಿ ಯೋಜನೆ ನಾಲ್ಕೈದು ವರ್ಷ ಹಿಂದೆಯೇ ಜಾರಿಯಾಗಿತ್ತಾದರೂ ರಾಜ್ಯದಲ್ಲಿ ಮಾತ್ರ ಅದನ್ನು ಶೀಥಲಗೃಹದಲ್ಲಿಟ್ಟಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೊಳಿಸಲು ನಿರ್ಧರಿಸಿ, ಟೆಂಡರ್ ಕರೆಯಲಾಯಿತು. ಒಂದು ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ 3.5 ಕೋಟಿ ರೂ.ನಿಂದ 4 ಕೋಟಿ ರೂ.ವರೆಗೆ ವೆಚ್ಚ ಆಗುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬರುತ್ತದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್ಗೆ ಗರಿಷ್ಠ 3.17 ರೂ. ನಿಗದಿಪಡಿಸಿದೆ,” ಎಂದು ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.
“ಕುಸುಮ್-ಸಿ ಮೊದಲ ಹಂತದಲ್ಲಿ ಕೃಷಿ ಫೀಡರ್ ಗಳ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದ್ದು ಸುಮಾರು 6,19,000 (6 ಲಕ್ಷ 19 ಸಾವಿರ) ಕೃಷಿ ಪಂಪ್ಸೆಟ್ಗಳಿಗೆ ಹಗಲು ವೇಳೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಸುಮಾರು 200 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಡಿಸೆಂಬರ್-2025ರ ವೇಳೆಗೆ 2,400 ಮೆ.ವ್ಯಾ. ಸಾಮರ್ಥ್ಯದ ಸೌರ ಘಟಕಗಳ ಸ್ಥಾಪನೆಯ ಗುರಿಯನ್ನು ಸಾಧಿಸಲಾಗುವುದು,” ಎಂದು ಮಾಹಿತಿ ನೀಡಿದರು.
“ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಗಳ ಬಳಿ ಸೌರ ಘಟಕಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್ ಗಳ ವ್ಯಾಪ್ತಿಯ ಕೃಷಿ ಪಂಪ್ ಸೆಟ್ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ,” ಎಂದರು.
“ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡುತ್ತಾರೆ,” ಎಂದು ಹೇಳಿದರು.
ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ್ , ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ENGLISH SUMMARY…
Chief Minister to Inaugurate KUSUM-C Scheme on June 11 at Gauribidanur – Energy Minister KJ George
· Chief Minister Siddaramaiah to launch the feeder level solarization of agriculture feeders under the Kusum-C scheme
· Solar-powered electricity to be supplied to irrigation pump sets via agricultural feeder solarization
Bengaluru, June 9, 2025: Chief Minister Siddaramaiah is set to inaugurate a solar substation built under the Kusum-C scheme on June 11 2025. The initiative aims to ensure a reliable daytime power supply for farmers’ agricultural pump sets, Energy Minister K.J. George said today at the curtain raiser event.
At a curtain-raiser press conference for the launch of the Kusum-C scheme, Energy Minister K.J. George announced that Chief Minister Siddaramaiah will inaugurate the initiative at 10:30 AM on Wednesday, June 11, at Netaji Stadium in Gauribidanur.
The event will also see the participation of Union Minister for New and Renewable Energy and Consumer Affairs, Food and Public Distribution Prahlad Joshi, Union Minister of State for New and Renewable Energy Shripad Yesso Naik, Deputy Chief Minister D.K. Shivakumar, Revenue Minister Krishna Byre Gowda, Chikkaballapura District In-charge Minister Dr. M.C. Sudhakar, Gauribidanur MLA Puttaswami Gowda, and several other dignitaries and officials.
The Kusum-C scheme aims to provide farmers with reliable daytime electricity by installing solar units near agricultural electricity feeders. These units will generate power locally, which will then be supplied to agricultural pump sets through the feeders. This localized generation ensures the delivery of high-quality power, the minister noted.
In Gauribidanur taluk’s Thondebhavi Hobli, a 20 MW solar unit has been established across approximately 60 acres in the villages of Hanumenahalli and Charakamattenahalli. This is the largest solar installation under the Kusum-C scheme in Karnataka to date, which is why Gauribidanur was chosen for the scheme’s official launch. The land for the project has been leased from private owners for a period of 25 years, he added.
Kusum-C implemented after our government came to power
The Kusum-C scheme, introduced four to five years ago, was initially put on hold in the state. However, after our government came to power, we decided to implement the scheme and invited tenders. The central government provides a subsidy of ₹ 1.05 crore for generating 1 megawatt of solar power, which significantly reduces the cost of establishment of the Solar Power System for the RESCO developers. The Karnataka Electricity Regulatory Commission has fixed a maximum rate of ₹3.17 per unit of electricity, ensuring affordable and reliable power supply for farmers.
In the first phase of the Kusum-C scheme, we aim to generate 2,400 megawatts of solar electricity through the solarization of agricultural feeders. This will provide quality daytime electricity to around 6,19,000 (6 lakh 19 thousand) agrarian pump sets, significantly reducing their energy costs and ensuring a reliable power supply. The construction of feeder level solarization plants with a capacity of about 200 MW has already been completed, and within the next few months, 545 MW capacity solar units across 93 locations will become operational. Our goal is to establish 2,400 MW of feeder level solarization plants by December 2025, bringing substantial benefits to our farming community.
It has been decided to establish solar units near power substations where technical feasibility exists. Private entities will set up the solar units and generate electricity, which the government will purchase and supply to the agricultural pump sets within the respective feeder’s coverage area. Since solar power is abundantly available during the daytime, adequate electricity will be available for farmers’ agricultural pump sets during the day, he said.
The Energy Minister also highlighted the transparency in the allocation of funds. He stated, “Four acres of land are required for the generation of one megawatt of electricity. If government land is available for establishing solar parks for feeder-level solarization, it will be provided free of charge to the Energy Department. Contractors must pay ₹25,000 annually per acre of land, which will be deposited into the District Collector’s account. The district in-charge minister, local legislators, and collectors will collaborate to allocate these funds for developing government schools, Anganwadis, and drinking water projects within the village panchayat jurisdiction of the solar park. In cases where government land is unavailable, private land will be taken on lease basis by the RESCO developers, and contractors will compensate landowners ₹25,000 per acre for this land,” the Energy Minister stated.
Additional Chief Secretary to the Government, Energy Department, Gaurav Gupta; Managing Director of Bangalore Electricity Supply Company Limited (BESCOM), Dr Shivashankar N.; Managing Director of Karnataka Renewable Energy Development Limited (KREDL), K.P. Rudrappaiah; and Technical Director of BESCOM, H.J. Ramesh were present at the press conference.
Key words: KUSUM-C Scheme, Inaugurate , June 11,Minister, KJ George