ಬೆಂಗಳೂರು,ಮಾರ್ಚ್,2,2026 (www.justkannada.in): ಇರಾನ್ , ಇಸ್ರೇಲ್ ಸಂಘರ್ಷ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆಗೆ ಪ್ರಯತ್ನ ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಕೃಷ್ಣಭೈರೇಗೌಡ, ಬಹಳಷ್ಟು ಜನ ಮಧ್ಯಪ್ರಾಚ್ಯ ದೇಶಗಳ ಏರ್ ಪೋರ್ಟ್ ನಲ್ಲಿ ಸಿಲುಕಿದ್ದಾರೆ. ಜನ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಮಾಹಿತಿ ಇದೆ ರಾಜ್ಯ ಸರ್ಕಾರ ತುರ್ತು ಸಹಾಯವಾಣಿ ಆರಂಭಿಸಿದೆ. ವೀಸಾ ಸಮಸ್ಯೆ ಇದ್ದರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದಿದ್ದಾರೆ.
ಏರ್ ಪೋರ್ಟ್ ನಲ್ಲಿ ಸಿಲುಕಿಕೊಂಡ ಕನ್ನಡಿಗರಿಗೆ ವಿಸಾಗೆ ಪ್ರಯತ್ನ ಮಾಡುತ್ತೇವೆ. ಕೇಂದ್ರದ ಜೊತೆ ಮಾತನಾಡಿ ವೀಸಾ ವ್ಯವಸ್ಥೆ ಮಾಡಿಸುತ್ತೇವೆ. ಏರ್ ಪೋರ್ಟ್ ನಿಂದ ಹೊರಗೆ ಕರೆಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ. ವೀಸಾ ಮೂಲಕ ಹೊರ ಬಂದರೆ ಹೋಟೆಲ್ ನಲ್ಲಿ ವ್ಯವಸ್ಥೆ ಮಾಡುತ್ತೇವೆ. ರಾಯಭಾರ ಕಚೇರಿ ಮೂಲಕ ಹೋಟಲ್ ವ್ಯವಸ್ಥೆ ಮಾಡಿ ಅದರ ಖರ್ಚು ವೆಚ್ಚವನ್ನು ಸರ್ಕಾರ ಭರಿಸಲಿದೆ. ರಾಜ್ಯ ಸರ್ಕಾರ ಎಲ್ಲಾ ಸಹಕಾರ ನೀಡಲು ಸಿದ್ದ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
Key words: Visa, arrangements, Kannadigas, Minister, Krishna Bhairegowda







