Sunday, September 20, 2026

BDA Apartments

ರಾಜ್ಯದಲ್ಲಿ 16,644 ಪೋಡಿ ಮುಕ್ತ ಗ್ರಾಮ- ಸಚಿವ ಕೃಷ್ಣ ಬೈರೇಗೌಡ BDA JK_Adv BDA Adv
Home Front Page ರಾಜ್ಯದಲ್ಲಿ 16,644 ಪೋಡಿ ಮುಕ್ತ ಗ್ರಾಮ- ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ 16,644 ಪೋಡಿ ಮುಕ್ತ ಗ್ರಾಮ- ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ, ಡಿಸೆಂಬರ್,18,2024 (www.justkannada.in): ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, ರಾಜ್ಯದಲ್ಲಿ ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 5,33,545 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಪ್ರಕರಣಗಳಲ್ಲಿನ ನ್ಯೂನತೆಗಳನ್ನು ಶೀಘ್ರವಾಗಿ ಸರಿಪಡಿಸಿಕೊಂಡು ಕಂದಾಯ ಹಾಗೂ ಭೂ ಮಾಪನ ಇಲಾಖೆಯ ನಡವಳಿಗಳೊಂದಿಗೆ ವಿಳಂಬವಿಲ್ಲದೆ ಪೋಡಿ ದುರಸ್ತಿ ಮಾಡಲಾಗುತ್ತಿದೆ ಎಂದರು.

ಈ ಹಿಂದೆ, ಮ್ಯುಟೇಷನ್ ಪೋಡಿಯಂತಹ ಪ್ರಕ್ರಿಯೆಯನ್ನು ಪೂರೈಸಲು ನಾಲ್ಕರಿಂದ ಆರು ತಿಂಗಳವರೆಗೆ ಕಾಲಾವಕಾಶ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ನಮ್ಮ ಸರ್ಕಾರವು ರೈತರಿಗೆ ಸಂಬಂಧಪಟ್ಟ ಇಂತಹ ಕೆಲಸಗಳಿಗೆ ಆದ್ಯತೆ ನೀಡಿ ಎಲ್ಲಾ ಹಂತಗಳ ಪ್ರಕ್ರಿಯೆಗಳನ್ನು ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಚುರುಕುಗೊಳಿಸಿದ್ದು, ಪೋಡಿಗೆ ಯೋಗ್ಯವಾಗಿರುವ ಯಾವುದೇ ಪ್ರಕರಣಗಳನ್ನು ಸರಾಸರಿ ಒಂದು ತಿಂಗಳ ಅವಧಿಯಲ್ಲಿ ಪೂರೈಸಲಾಗುತ್ತಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

Key words: 16,644 podi-free villages, Minister, Krishna Byre Gowda