Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಸುಲಭ ಶೌಚಾಲಯಕ್ಕೆ ಮೋದಿ ಹೆಸರಿಡಲಿ ಎಂಬ ಹೇಳಿಕೆ ವಿಚಾರ: ಕಾಂಗ್ರೆಸ್ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ...

ಸುಲಭ ಶೌಚಾಲಯಕ್ಕೆ ಮೋದಿ ಹೆಸರಿಡಲಿ ಎಂಬ ಹೇಳಿಕೆ ವಿಚಾರ: ಕಾಂಗ್ರೆಸ್ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಕಿಡಿ.

ಶಿವಮೊಗ್ಗ,ಆಗಸ್ಟ್,13,2021(www.justkannada.in): ಸುಲಭ ಶೌಚಾಲಯಕ್ಕೆ ಮೋದಿ ಹೆಸರಿಡಲಿ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಕಿಡಿ ಕಾರಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ವಿಶ್ವವೇ ಮೆಚ್ಚಿಕೊಂಡ ಪ್ರಧಾನಿ ಮೋದಿ ಬಗ್ಗೆ ಕಾಂಗ್ರೆಸ್ ನಾಯಕರು ಲಘುವಾಗಿ ಹೇಳಿಕೆ ನೀಡಿದ್ದಾರೆ. ಇವರಾಡಿದ ಮಾತುಗಳನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಒಪ್ಪುತ್ತಾರೆಯೇ?  ಎಂದು ಪ್ರಶ್ನಿಸಿದರು.

ಸುಲಭ ಶೌಚಾಲಯಕ್ಕೆ ಮೋದಿ ಹೆಸರಿಡಲಿ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರ  ಹೇಳಿಕೆ ಯಾರಿಗೆ ತಾನೆ ಸಿಟ್ಟು ತರಲ್ಲ ಹೇಳಿ, ಅದಕ್ಕೆ ನಾನು ಹಾಗೆ ಮಾತನಾಡಿದ್ದೇನೆ. ಬೈದಿದ್ದೇನೆ. ನಂತರ ತಪ್ಪಿನ ಅರಿವಾಗಿ ಹೇಳಿಕೆಯನ್ನ ವಿತ್ ಡ್ರಾ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.

ಬಿ.ಕೆ.ಹರಿಪ್ರಸಾದ್ ಆಡಿದ ಮಾತುಗಳನ್ನು ಸ್ವತಃ ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳುತ್ತಾರಾ? ಪ್ರಧಾನಿ ಬಗ್ಗೆ ಅವರು ಆಡಿದ ಮಾತು ಸರಿಯೇ? ಎಂದು ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು.

Key words: Minister- KS Eshwarappa-again -against -Congress