ಸಿಎಂ ಬಿಎಸ್ ವೈ ರಾಜೀನಾಮೆಗೆ ಆಗ್ರಹಿಸಿದ ಸಿದ್ದರಾಮಯ್ಯಗೆ ಸಚಿವ ಕೆ.ಎಸ್ ಈಶ್ವರಪ್ಪ ಟಾಂಗ್…

ಶಿವಮೊಗ್ಗ,ಏಪ್ರಿಲ್,3,2021(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ದರಾಮಯ್ಯನವರಿಗೆ ಅರ್ಜೆಂಟಾಗಿ ಸಿಎಂ ಆಗಬೇಕಿದೆ. ಬಿಎಸ್ ವೈ ರಾಜೀನಾಮೆ ನೀಡಿದರೆ ತಾನು ಸಿಎಂ ಆಗಬಹುದು ಎಂಬ ಭ್ರಮೆಯಲ್ಲಿದ್ದಾರೆ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಟಾಂಗ್ ನೀಡಿದ್ದಾರೆ.Illegally,Sand,carrying,Truck,Seized,arrest,driver

ಈ ಕುರಿತು ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ಧರಾಮಯ್ಯ ಅವರನ್ನು ಜನ ತಿರಸ್ಕರಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನ ಸೋಲಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನೇ ಸಿದ್ಧರಾಮಯ್ಯ ಕಳೆದುಕೊಂಡಿದ್ದಾರೆ. ಈಗ ಇಂತಹ ವಿಚಾರಕ್ಕೆ ಸಿ.ಎಂ.ರಾಜೀನಾಮೆ ಕೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ರಾಜೀನಾಮೆ ಕೊಡವು ಪ್ರಶ್ನೆಯೇ ಉದ್ಭವಿಸಲ್ಲ ಎಂದರು.

ಸಿದ್ಧರಾಮಯ್ಯ ಅರ್ಜೆಂಟಾಗಿ ಸಿಎಂ ಆಗಬೇಕಿದೆ. ಬಿಎಸ್ ವೈ ರಾಜೀನಾಮೆ ಕೊಟ್ಟರೇ ಸಿಎಂ ಆಗುತ್ತೇನೆಂಬ ಭ್ರಮೆ ಸಿದ್ಧರಾಮಯ್ಯಗಿದೆ. ಆದರೆ ಸಿಎಂ ಬಿಎಸ್ ವೈ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಸಿಎಂ ಆಗುವ ಭ್ರಮೆ ಕೂಡ ಸಿದ್ದರಾಮಯ್ಯಗೆ  ಬೇಡ ಎಂದು ಟಾಂಗ್ ನೀಡಿದರು.Minister -KS Eshwarappa- Siddaramaiah, demanding -resignation -CM BS yeddyurappa

ಉಪಚುನಾವಣೆಯಲ್ಲಿ ಪತ್ರದ ವಿಚಾರ ವಿರೋಧ ಪಕ್ಷಗಳಿಗೆ ಅಸ್ತ್ರವಾಗಿಲ್ಲ. ಇದಿಲ್ಲ ಎಂದರೆ ಇನ್ನೊಂದು ಅಸ್ತ್ರವನ್ನು ತೆಗೆದುಕೊಳ್ಳುತ್ತಿದ್ದರು. ಬಿಜೆಪಿ ಸಂಘಟನೆ ಪ್ರಬಲವಾಗಿದೆ. ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಮತ ಯಾಚಿಸಿದ್ದಾರೆ. ಈ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಸಿ.ಎಂ.ಯಡಿಯೂರಪ್ಪ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಜನ ಸರ್ಕಾರಗಳ ಜೊತೆಗಿದ್ದಾರೆ. ಹಾಗಾಗಿ ಪ್ರತಿ ಪಕ್ಷಗಳಿಗೆ ಟೀಕಿಸಲು ಬೇರೆ ಅಸ್ತ್ರವಿಲ್ಲದೆ ರಾಜ್ಯಪಾಲರ ಭೇಟಿ ವಿಚಾರವನ್ನೇ ಪ್ರಸ್ತಾಪಿಸಿ ಗೊಂದಲ ಸೃಷ್ಠಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Key words: Minister -KS Eshwarappa- Siddaramaiah, demanding -resignation -CM BS yeddyurappa