ಬೆಳಗಾವಿ, ಜನವರಿ,19,2026 (www.justkannada.in): ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಯಾರೇ ಆಗಿರಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕಾನೂನು ರೀತಿ ಕ್ರಮ ಆಗಲಿದೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದರೆ, ಅವರು ಎಷ್ಟೇ ದೊಡ್ಡ ಅಧಿಕಾರಿ ಆಗಿದ್ದರೂ ಕಾನೂನು ಪ್ರಕಾರ ಕ್ರಮವಾಗುತ್ತದೆ ಎಂದು ತಿಳಿಸಿದರು.
Ke words: DGP, Rasalile case, Legal action, Minister, Lakshmi Hebbalkar







