ಭೂ ರಹಿತ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

  ಹೊಸಪೇಟೆ (ವಿಜಯನಗರ),ಮೇ,20,2025 (www.justkannada.in):  ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಶ್ವಪರಂಪರೆ ವಿಜಯನಗರದ ಹೆಬ್ಬಾಗಿಲು ಎನಿಸಿಕೊಂಡಿರುವ ಹೊಸಪೇಟೆಯಲ್ಲಿ ಮಂಗಳವಾರ  ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶ ನಡೆಯಿತು.

ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಅವರು ಭಾಗವಹಿಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು.

ಸಮಾವೇಶದಲ್ಲಿ 1,11,111 ಭೂ ರಹಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಜೊತೆಗೆ ಕಂದಾಯ ಇಲಾಖೆಯ ಮಹತ್ವದ ಯೋಜನೆಗಳನ್ನು ಸಮಾವೇಶದ ಮೂಲಕ ಸಾಕಾರಗೊಳಿಸಲಾಯಿತು.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ  ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಏಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Key words:  congress, convention, Minister, Lakshmi Hebbalkar, distribute, title-deed