ಲೋಕಸಭೆ ಚುನಾವಣೆಯಲ್ಲಿ ಸೋತರೆ ಸಚಿವರ ತಲೆದಂಡ ಎನ್ನುವುದು ಸುಳ್ಳು- ಸತೀಶ್ ಜಾರಕಿಹೊಳಿ.

ಬೆಳಗಾವಿ,ಜನವರಿ,20,2024(www.justkannada.in):  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಚಿವರ ತಲೆದಂಡ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಚಿವರ ತಲೆ ದಂಡವಾಗುತ್ತದೆ ಎನ್ನುವುದು ಸುಳ್ಳು. ಲೋಕಸಭಾ ಚುನಾವಣೆಯಲ್ಲಿ ಸಚಿವರಿಗೆ ಯಾವುದೇ ಮಾನದಂಡ ಇಲ್ಲ.  28 ಲೋಕಸಭಾ ಕ್ಷೇತ್ರಗಳಲ್ಲಿ ಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಹೀಗಿರುವಾಗ ಸಚಿವರ ತಲೆದಂಡ ಎಂಬುದು ಸುಳ್ಳು. ಅಂತಹ ವಿಚಾರ ಪಕ್ಷದ ಹೈಕಮಾಂಡ್ ಮುಂದಿಲ್ಲ  ಎಂದು ಹೇಳಿದರು.

ಇನ್ನು ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳ ಅರ್ಜಿ ಹೈಕಮಾಂಡ್ ಗೆ ಸಲ್ಲಿಸಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 10 ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ 6 ಆಕಾಂಕ್ಷಿಗಳ ಅರ್ಜಿ ಸಲ್ಲಿಕೆಯಾಗಿವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: Minister- -loses – Lok Sabha- elections – Satish Jarakiholi.