ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ

ಬೆಂಗಳೂರು,ಮಾರ್ಚ್,11,2026 (www.justkannada.in):  ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಕೇಂದ್ರ ಸರಕಾರವು ಹತ್ತಿರದಲ್ಲೇ ಇರುವ ತಮಿಳುನಾಡು ಚುನಾವಣೆಯ ಮೇಲೆ ಕಣ್ಣಿಟ್ಟುಕೊಂಡು ಹೀಗೆ ಮಾಡಿರಬಹುದು. ಆದರೆ ನಮ್ಮ ರಾಜ್ಯದ ಬೇಡಿಕೆ ಬಗ್ಗೆ ಅದು ಉದಾಸೀನ ಮನೋಭಾವ ಪ್ರದರ್ಶಿಸಿರುವುದು ಪ್ರಶ್ನಾರ್ಹ ಎಂದಿದ್ದಾರೆ.

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕು. ಇದರಿಂದ ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲ ಆಗುತ್ತದೆ ಎಂದು ಕಳೆದ ವರ್ಷ (2025ರ ಜೂನ್ 24ರಂದು) ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆಯಲಾಗಿತ್ತು. ಈಗ ನೋಡಿದರೆ ಹೀಗಾಗಿದೆ. ಧಾರವಾಡ ಸಂಸದರಾಗಿ ಕೇಂದ್ರ ಸಂಪುಟದಲ್ಲಿರುವ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಈಗ ನಿರ್ದಿಷ್ಟವಾಗಿ ಧ್ವನಿ ಎತ್ತಿ, ರಾಜ್ಯದ ಹಿತಾಸಕ್ತಿಯ ಪರ ನಿಲ್ಲಬೇಕು ಎಂದು ಸಚಿವ ಎಂ.ಬಿ ಪಾಟೀಲ್ ಅವರು ಆಗ್ರಹಿಸಿದ್ದಾರೆ.

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣ ಎರಡರ ಪೈಕಿ ಒಂದನ್ನಾದರೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸಬೇಕು. ಎರಡನ್ನೂ ಉನ್ನತೀಕರಿಸಿದರೆ ಅದು ಇನ್ನೂ ಸ್ವಾಗತಾರ್ಹ. ರಾಜ್ಯದ ಅಗತ್ಯವನ್ನು ಕೇಂದ್ರ ಮನಗಾಣಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ENGLISH SUMMARY..

Why only Madurai? Declare Hubballi and Belagavi Airports as International Airports too

“Butter for Tamil Nadu, lime for us”: M. B. Patil expresses displeasure against Centre

Bengaluru: The Narendra Modi-led Central Government has declared Madurai Airport in Tamil Nadu as an international airport but has not taken a similar decision regarding Hubballi and Belagavi airports in Karnataka. This reflects a discriminatory approach and is not acceptable, Infrastructure Development Minister M. B. Patil said on Wednesday. “How can it be butter for them and lime for us?” he questioned.

Speaking on the issue, he said the Central Government may have taken this decision keeping the upcoming Tamil Nadu elections in mind. However, its indifferent attitude towards Karnataka’s demand is questionable, he remarked.

A letter had been written on June 24, 2025, to Union Civil Aviation Minister Ram Mohan Naidu, requesting that Hubballi and Belagavi airports be upgraded to international status, as this would greatly benefit the North Karnataka region. In this context, Union Minister and Dharawada MP Pralhad Joshi, Belagavi MP Jagadish Shettar, and Haveri MP Basavaraj Bommai should raise their voices and stand firmly for the interests of the State, he urged.

At least one of the two airports — Hubballi or Belagavi — should be declared an international airport, he said. If both are upgraded, it would be even more welcome. The Central Government must recognise the State’s requirement, Patil added.

Key words: Hubballi, Belgaum, airports, international airports, Minister, M.B. Patil