Thursday, July 30, 2026

BDA Apartments

Home Front Page ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಂಘಟನೆ, ಸಿದ್ದರಾಮಯ್ಯರವರ ವರ್ಚಸ್ಸು ಕೆಲಸ ಮಾಡಿದೆ- ಸಚಿವ ಎಂ.ಬಿ ಪಾಟೀಲ್

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಂಘಟನೆ, ಸಿದ್ದರಾಮಯ್ಯರವರ ವರ್ಚಸ್ಸು ಕೆಲಸ ಮಾಡಿದೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಏಪ್ರಿಲ್,29,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಹಲವು ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿಯಾಗಿ ಚರ್ಚಿಸುತ್ತಿದ್ದಾರೆ.

ಈ ಸಂಬಂಧ ಮಾತನಾಡಿರುವ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎಲ್ಲರೂ ಶ್ರಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಸಂಘಟನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರ ವರ್ಚಸ್ಸು ಕೆಲಸ ಮಾಡಿದೆ. ಕಾಂಗ್ರೆಸ್ ನ ಎಲ್ಲಾ ನಾಯಕರು ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರಿಂದ ಹೈಕಮಾಂಡ್ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್, ಹೈಕಮಾಂಡ್ ಭೇಟಿಗೆ ಎಲ್ಲರಿಗೂ ಅವಕಾಶವಿದೆ. ಸತೀಶ್ ಸೇರಿ ಎಲ್ಲರಿಗೂ ಅವಕಾಶವಿದೆ. ಸತೀಶ್ ಏನು ಚರ್ಚೆ ಮಾಡಿದ್ದಾರೆ ಎಂದು ಗೊತ್ತಿಲ್ಲ ಎಂದರು.

Key words: DK Shivakumar, Siddaramaiah, Congress, power, Minister, M.B. Patil