ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನ ಟೀಕಿಸಿರುವ ಬಿಜೆಪಿಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ರಾಜ್ಯದಲ್ಲಿ ನಡೆಯುತ್ತಿರುವುದು ಜಾತಿಗಣತಿ ಅಲ್ಲ . ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಆದರೆ ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಮೀಕ್ಷೆಯಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದರು.

ಭಾರತದಲ್ಲಿ ಇರುವವರು ಭೌಗೋಳಿಕವಾಗಿ ಹಿಂದೂಗಳೆ.  ಸಿಖ್ಖರು ಬೌದ್ದರು,ಜೈನರು ಸಹ ಬೌಗೋಳಿಕವಾಗಿ ಹಿಂದೂಗಳೆ ಎಂದು ಎಂ.ಬಿ ಪಾಟೀಲ್ ತಿಳಿಸಿದರು.

Key words: No need, politicize, social and educational surveys, Minister, M.B. Patil