ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಬಗ್ಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಸಚಿವ ಸಂಫುಟ ಸಭೆಯಲ್ಲಿ ಚರ್ಚೆಯಾಗಿದೆ. ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಸಿಇಒಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಬೆಳಗಾವಿ ಹುಬ್ಬಳ್ಳಿಗೆ ಹೋಗಿದ್ದ ವೇಳೇ ಶಿಕ್ಷಕರು ಸಮಸ್ಯೆ ಗಮನಕ್ಕೆ ತಂದರು. ಇನ್ನು ಅಗತ್ಯವಿದ್ದರೆ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡುತ್ತಾರೆ ಎಂದರು.
Key words: CM, expansion, caste survey, Minister, M.B. Patil