ಬೆಂಗಳೂರು,ಅಕ್ಟೋಬರ್,24,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದಿದ್ದಾರೆ. 11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ, ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ, ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ, ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ. ಹೂಡಿಕೆ ಮಾಡಲಿವೆ. ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ತೊಡಗಿಸಲಿವೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಕಾನೂನು ಸಚಿವ ಎಚ್.ಕೆ.ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದರು.
ENGLISH SUMMARY..
State Clears ₹27,607 Crore Investment Proposals Creating 8,704 Jobs
Bengaluru: The 66th meeting of the State High-Level Clearance Committee, chaired by Chief Minister Siddaramaiah at Vidhana Soudha on Friday, approved 13 investment proposals with a total investment of ₹27,607.26 crore. The projects are expected to generate around 8,704 direct jobs.
The approvals include 11 new investment proposals and two additional investment proposals, according to Large and Medium Industries Minister M. B. Patil. While the new proposals involve an investment of ₹27,228.51 crore, the expansion proposals account for ₹378.75 crore.
The new investment proposals include, M/s Vayu Assets Private Limited: ₹1,251 crore (1,912 jobs); M/s Tejas Networks Limited: ₹542.19 crore (1,312 jobs); M/s Reliance Consumer Products Limited: ₹1,622 crore (1,200 jobs); M/s JSW JFE Electrical Steel Private Limited: ₹7,102 crore (900 jobs); M/s HSS Textile Private Limited: ₹740 crore (800 jobs); M/s SFX India Mfg Private Limited: ₹9,298 crore (806 jobs); M/s Schneider Electric IT Business India Private Limited: ₹1,520.75 crore (550 jobs); M/s Toyota Industries Engine India Private Limited: ₹1,330 crore (550 jobs); M/s JSW Steel Limited: ₹1,300.57 crore (271 jobs); M/s Grasim Industries Limited: ₹1,386 crore (203 jobs); M/s QPIAI India Private Limited: ₹1,136 crore (200 jobs).
The additional investment proposals are from M/s Embassy Industrial Park (₹80 crore) and M/s Balaji Wafers Private Limited (₹298.75 crore), totalling ₹ 378.75 crore.
Deputy Chief Minister D. K. Shivakumar, Energy Minister K. J. George, IT/BT Minister Priyank Kharge, Higher Education Minister Dr M. C. Sudhakar, and Labour Minister Santosh Lad were present at the meeting.
Key words: 13 companies, state, invested, Rs 27,000 crore, Minister M.B. Patil







