ಬುರ್ಕಾನ್ ಗ್ರೂಪ್ ನಿಂದ ಎಐ ಸರ್ವರ್ ಉತ್ಪಾದನೆ, 1,500 ಕೋಟಿ ರೂ. ಹೂಡಿಕೆ- ಸಚಿವ ಎಂ. ಬಿ ಪಾಟೀಲ್

ಬೆಂಗಳೂರು,ನವೆಂಬರ್,6,2025 (www.justkannada.in): ಅಮೆರಿಕದ ಮಿಯಾಮಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಬುರ್ಕಾನ್ ವರ್ಲ್ಡ್ ಇನ್ವೆಸ್ಟ್ಮೆಂಟ್ ಗ್ರೂಪ್ ರಾಜ್ಯದಲ್ಲಿ ಕೃತಕ ಬುದ್ಧಿ ಮತ್ತೆ ತಂತ್ರಜ್ಞಾನ ದಿಂದ ಕಾರ್ಯನಿರ್ವಹಿಸುವ ಅತ್ಯಾಧುನಿಕ ಎಐ ಸರ್ವರ್ ಗಳ ಉತ್ಪಾದನೆಗೆ 1,500 ಕೋಟಿ ರೂಪಾಯಿ ಬಂಡವಾಳ ಹೂಡಲು ಮುಂದೆ ಬಂದಿದೆ. ಇದು ದೇವನಹಳ್ಳಿ ಸಮೀಪ 10-15 ಎಕರೆ ಭೂಮಿ ಕೇಳಿದ್ದು, ಇದನ್ನು ಒದಗಿಸಲಾಗುವುದು. ಇದರಿಂದ ಉತ್ಪಾದನಾ ವಲಯದಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಬುರ್ಕಾನ್ ವರ್ಲ್ಡ್ ನ ಅಧೀನ ಸಂಸ್ಥೆಯಾದ ಟಿಜಿಜಿ (ದಿ ಘಾಜಿ ಗ್ರೂಪ್)  ಸಿಇಒ ಶಫಿ ಖಾನ್ ಮತ್ತು ಅವರ ತಂಡದೊಂದಿಗೆ ಹೂಡಿಕೆ ಮತ್ತಿತರ ಸಂಗತಿಗಳ ಬಗ್ಗೆ ವಿಸ್ತೃತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಶಿಗ್ಗಾವ್ ಶಾಸಕ ಯಾಸಿರ್ ಅಹಮದ್ ಪಠಾಣ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ಕ್ವಾಡ್-ಜೆನ್ ಕಂಪನಿ ಅಧ್ಯಕ್ಷ ಸಿ.ಎಸ್.ರಾವ್ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಡೇಟಾ ಸೆಂಟರ್ ಗಳಲ್ಲಿ ಬಳಕೆಯಾಗುವ ಈ ಸರ್ವರ್ ಗಳಿಗೆ ವಿಪರೀತ ಬೇಡಿಕೆ ಇದ್ದು ಬೇರೆ ಬೇರೆ ದೇಶಗಳಿಗೆ ರಫ್ತು ಕೂಡ ಮಾಡುವುದಾಗಿ ಕಂಪನಿಯವರು ಹೇಳಿದ್ದು, ಅದಕ್ಕೆ ಪೂರ್ಣ ಸಹಕಾರ ನೀಡಲಾಗುವುದು. ಸಹಾಯಧನ ಇತ್ಯಾದಿ ವಿಚಾರಗಳ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಲು ಪ್ರಧಾನ ಕಾರ್ಯದರ್ಶಿ ಅವರಿಗೆ  ಸೂಚಿಸಿದರು.

ಇದಲ್ಲದೆ, ಬುರ್ಖಾನ್ ಸಮೂಹವು ಅತ್ಯಾಧುನಿಕ ಸಿಪಿಯು, ಜಿಪಿಯು, ಎಐ-ರೆಡಿ ನೆಟ್ವರ್ಕ್ ಸ್ವಿಚ್ ಉತ್ಪಾದನೆ ಆರಂಭಿಸುವುದಕ್ಕೂ ಬಯಸಿದೆ. ಇದಕ್ಕಾಗಿ ಅದು ಜಾಗತಿಕ ಮಟ್ಟದಲ್ಲಿ ತನ್ನ ತಾಂತ್ರಿಕ ಪಾಲುದಾರ ಕಂಪನಿಗಳಾದ ಗಿಗಾಬೈಟ್ ಮತ್ತು ಸೆರಾ ನೆಟ್ವರ್ಕ್ ಜತೆ ರಾಜ್ಯದಲ್ಲಿ ಬಂಡವಾಳ ಹೂಡಲು ಬಯಸಿದೆ. ಸರಕಾರ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದಿದ್ದಾರೆ.

ಬುರ್ಕಾನ್ ಕಂಪನಿಯ ಹೂಡಿಕೆಯಿಂದ ಸೆಮಿಕಂಡಕ್ಟರ್, ಎಐ ಹಾರ್ಡ್-ವೇರ್ ಮತ್ತು ಆಧುನಿಕ ಎಲೆಕ್ಟ್ರಾನಿಕ್ಸ್ ಕಾರ್ಯಪರಿಸರದ ಬಲವರ್ಧನೆಯಾಗಲಿದೆ. ಅದು ಉತ್ಪಾದನಾ ಪ್ರಕ್ರಿಯೆಯಲ್ಲಿ ರೆಸೊಲ್ಯೂಟ್ ಗ್ರೂಪ್ ಮತ್ತು ಕ್ವಾಡ್-ಜೆನ್ ಕಂಪನಿಗಳ ಸಹಯೋಗ ಹೊಂದಲು ಬಯಸಿದೆ. ಇದರಿಂದ ಸ್ಥಳೀಯವಾಗಿಯೇ ಆರ್ & ಡಿ ಅಭಿವೃದ್ಧಿ, ತಂತ್ರಜ್ಞಾನ ವರ್ಗಾವಣೆ, ಶಿಕ್ಷಣ ಸಂಸ್ಥೆಗಳು ಮತ್ತು ಇಲ್ಲಿಯ ಕೈಗಾರಿಕೆಗಳೊಂದಿಗೆ ಸಹಭಾಗಿತ್ವ ಕೈಗೂಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಂಪನಿಯು ಭಾರತ ಮತ್ತು ಇಎಂಇಎ ವಲಯಗಳಲ್ಲಿ ತಾನು ಒದಗಿಸಲಿರುವ ಸೇವೆಗಳಿಗೆ ಬೆಂಗಳೂರನ್ನು ಉತ್ಕೃಷ್ಟತಾ ಕೇಂದ್ರವನ್ನಾಗಿ ಮಾಡಿಕೊಳ್ಳಲಿದೆ. ಜತೆಗೆ ರಾಜ್ಯಾದ್ಯಂತ ವಿಶೇಷ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಒಟ್ಟಾರೆಯಾಗಿ ಅದು ನಮ್ಮೊಂದಿಗೆ ಬೃಹತ್ ಕೈಗಾರಿಕೆ, ಐಟಿ-ಬಿಟಿ ಮತ್ತು ಇ.ಎಸ್.ಡಿ.ಎಂ. ಕ್ಷೇತ್ರಗಳಲ್ಲಿ ಪಾಲುದಾರಿಕೆಯ ಅವಕಾಶಗಳನ್ನು ಪರಿಶೀಲಿಸುತ್ತಿದೆ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.

ENGLISH SUMMARY..

Burkhan Group to Invest 1,500 Crore in AI Server Manufacturing: M. B. Patil

Bengaluru: The Burkhan World Investment Group, headquartered in Miami, USA, has announced plans to invest ₹1,500 crore in Karnataka for the production of advanced AI-powered servers. The company has sought 10–15 acres of land near Devanahalli, which will be provided. This investment is expected to generate significant employment opportunities in the manufacturing sector, said Minister for Large and Medium Industries M. B. Patil on Thursday.

The minister held detailed discussions on the proposed investment and related matters with Shafi Khan, CEO of TGG (The Ghazi Group- a subsidiary of Burkhan World), and his team at Vidhana Soudha. Also present at the meeting were Shiggaon MLA Yasir Ahmad Pathan, Dr Selvakumar, Principal Secretary, Department of Industries, Dodda Basavaraju, Managing Director, Udyog Mitra, and C. S. Rao, Chairman, Quad-Gen.

Speaking later, the minister said the servers proposed to be manufactured by Burkhan are in high global demand, particularly for data centres, and the company also plans to export them to several countries. He assured the government’s full cooperation for the project and directed the Principal Secretary to convene a meeting of officials to discuss matters related to subsidies and other incentives.

The minister further noted that the Burkhan Group intends to set up facilities for the production of advanced CPUs, GPUs, and AI-ready network switches in Karnataka. For this purpose, the company plans to collaborate with its global technology partners — Gigabyte, and Cera Network. The state government will extend its positive support to this initiative, he added.

Patil said the investment by Burkhan Group would strengthen Karnataka’s ecosystem for semiconductors, AI hardware, and advanced electronics. The company also plans to collaborate with Resolute Group and Quad-Gen in its manufacturing process. This initiative, he said, will promote local R&D, technology transfer, and partnerships with educational institutions and industries across the state.

The minister added that the company will establish Bengaluru as its Centre of Excellence for operations serving India and the EMEA (Europe, Middle East and Africa) region. It also plans to roll out special skill development programmes across Karnataka. Overall, the company is exploring opportunities for partnership with the state government in the large industries, IT-BT, and ESDM (Electronics System Design and Manufacturing) sectors, the minister said.

Key words: Burcon Group, manufacture, AI server, invest, Minister, M. B. Patil