Thursday, October 22, 2026

Dasara Wishes

Happy Dasara
Home Front Page ಬೆಂಗಳೂರು ಭೇಟಿಗಾಗಿ ಆಗಮಿಸಿ ಜರ್ಮನಿಯ ಚಾನ್ಸೆಲರ್: ಸಚಿವ ಎಂ.ಬಿ ಪಾಟೀಲ್ ರಿಂದ ಸ್ವಾಗತ

ಬೆಂಗಳೂರು ಭೇಟಿಗಾಗಿ ಆಗಮಿಸಿ ಜರ್ಮನಿಯ ಚಾನ್ಸೆಲರ್: ಸಚಿವ ಎಂ.ಬಿ ಪಾಟೀಲ್ ರಿಂದ ಸ್ವಾಗತ

ಬೆಂಗಳೂರು, ಜನವರಿ 13,2026 (www.justkannada.in): ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗದವರನ್ನು ಬಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಮಯದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ  ಡಾ. ಕೆ.ಜಿ ಜಗದೀಶ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಹಾಗೂ ಜರ್ಮನಿ ಕಾನ್ಸೂಲೇಟ್ ಜನರಲ್ ನವದೆಹಲಿ ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗವು ಇಂದು ಬೆಂಗಳೂರಿನ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಇಂದು  ಸಂಜೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾಗಲಿದ್ದಾರೆ.

Key words: German, Chancellor, Bengaluru, Welcome, Minister, M.B. Patil