Friday, September 25, 2026

BDA Apartments

Home Front Page ಅನಿತಾ ಕುಮಾರಸ್ವಾಮಿ ಜಮೀನು ಬಗ್ಗೆ ಹೇಳಿಕೆ : ವಿಷಾದ ವ್ಯಕ್ತಪಡಿಸಿದ ಸಚಿವ ಎಂ.ಬಿ ಪಾಟೀಲ್

ಅನಿತಾ ಕುಮಾರಸ್ವಾಮಿ ಜಮೀನು ಬಗ್ಗೆ ಹೇಳಿಕೆ : ವಿಷಾದ ವ್ಯಕ್ತಪಡಿಸಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,24,2026 (www.justkannada.in):  ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಬಳಿ 100 ಎಕರೆ ಜಮೀನು ಇದೆ ಎಂಬ ತಮ್ಮ ಹೇಳಿಕೆಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಸಚಿವ ಎಂ.ಬಿ ಪಾಟೀಲ್ ಹೇಳಿಕೆ ಬಗ್ಗೆ ಕಿಡಿಕಾರಿ ಟ್ವೀಟ್ ಮಾಡಿದ್ದ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು, ನನ್ನ ಬಳಿ ಇರುವುದು 100 ಎಕರೆ ಅಲ್ಲ 32 ಎಕರೆ ಮಾತ್ರ ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ ಪಾಟೀಲ್, ಹಿಂದೆ ಹೆಚ್.ಡಿ.ಕುಮಾರಸ್ವಾಮಿ ಅವರೇ ತಮ್ಮ ಪತ್ನಿಯ ಹೆಸರಿನಲ್ಲಿ ಬಿಡದಿಯಲ್ಲಿ ಜಮೀನಿದೆ ಎಂದಿದ್ದರು. ಬಿಡದಿಯಲ್ಲಿ ಅನಿತಾ ಕುಮಾರಸ್ವಾಮಿ ಅವರು 100 ಎಕರೆ ಜಮೀನು ತೆಗೆದುಕೊಂಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗಿತ್ತು.  ಒಂದು ವೇಳೆ ಅಲ್ಲಿ ಅಷ್ಟು ಜಮೀನು ಇಲ್ಲದಿದ್ದರೆ ಅವರು ಆಗಲೇ ಸ್ಪಷ್ಟೀಕರಣ ನೀಡಬೇಕಿತ್ತು. ನಮ್ಮ ಭೂಮಿ ಇಲ್ಲ ಎಂದು ಹೇಳಿದರೆ ಇಲ್ಲಿಗೆ ಮುಗಿದು ಹೋಗುತ್ತಿತ್ತು ಎಂದರು.ಅನಿತಾ ಕುಮಾರಸ್ವಾಮಿ ಜಮೀನು ಬಗ್ಗೆ ಹೇಳಿಕೆ jk02_new jk02 new

ಅನಿತಾ ಕುಮಾರಸ್ವಾಮಿ ಅವರ ಮೇಲೆ ನನಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಅವರು ನಮಗೆ ಸಹೋದರಿ ಇದ್ದಂತೆ. ನನ್ನ ಮಾತಿನಿಂದ ಅವರಿಗೆ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ” ಎಂದು  ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

Key words: Minister, M.B. Patil, Anitha Kumaraswamy, land