ವಿಧಾನಸೌಧದ ಕಚೇರಿಗೆ ದೇವತಾಪೂಜೆ ನೆರವೇರಿಸಿದ ಸಚಿವ ಎಂ.ಬಿ.ಪಾಟೀಲ್.

kannada t-shirts

ಬೆಂಗಳೂರು,ಜೂನ್,12,2023(www.justkannada.in):  ಬೃಹತ್‌ ಮತ್ತು ಮಧ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ (ಕೊಠಡಿ ನಂ.344) ಸೋಮವಾರ ವಿಧಿಬದ್ಧವಾಗಿ ದೇವತಾಪೂಜೆ ನೆರವೇರಿಸಿದರು.

ಮಮದಾಪುರ ವಿರಕ್ತಮಠದ ಶ್ರೀ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳ ನೇತೃತ್ವದ ತಂಡವು ಈ ಕಾರ್ಯವನ್ನು ನೆರವೇರಿಸಿತು. ಈ ಸಂದರ್ಭದಲ್ಲಿ ಸಚಿವರ ಪತ್ನಿ ಆಶಾ ಪಾಟೀಲ ಮತ್ತು ಮಕ್ಕಳಾದ  ರಾಹುಲ್ ಪಾಟೀಲ್ ಹಾಗೂ ಧ್ರುವ ಪಾಟೀಲ್ ಇದ್ದು, ಪೂಜೆಯಲ್ಲಿ ಪಾಲ್ಗೊಂಡು, ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಇದಲ್ಲದೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ,  ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ರವಿ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ್, ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರು ಮುಂತಾದವರು ಉಪಸ್ಥಿತರಿದ್ದರು.

Key words: Minister -M. B. Patil – worship -Vidhana Soudha-office.

website developers in mysore