ಬೆಂಗಳೂರು,ಏಪ್ರಿಲ್,24,2026 (www.justkannada.in): ಸಿಇಟಿ ಪರೀಕ್ಷೆ ವೇಳೆ ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಸಿದ್ದು, ಬಳಿಕ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಎಂ.ಸಿ ಸುಧಾಕರ್, ಇದುವರೆಗೆ ನನಗಾಗಲಿ ಕೆಇಎ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ರೀತಿ ಆಗಿದ್ದರೆ ಅಧಿಕಾರಿ, ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ನಿಯಮವಿದೆ. ಡ್ರೆಸ್ ಕೋಡ್ ಕುರಿತು ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ ಎಂದು ಸಚಿವ ಸುಧಾಕರ್ ತಿಳಿಸಿದರು.
Key words: Janiwar, CET exam, Action, Minister, M.C. Sudhakar







