ಶಿವಮೊಗ್ಗ,ಸೆಪ್ಟಂಬರ್,9,2025 (www.justkannada.in): ಶಿವಮೊಗ್ಗದ ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪ ಕೇಳಿ ಬಂದಿದ್ದು ಈ ಕುರಿತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಪಾಕ್ ಪರ ಘೋಷಣೆ ಸಂಬಂಧ ಘಟನೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಶಿವಮೊಗ್ಗ ಎಸ್ ಪಿಯವರಿಗೆ ಹೇಳಿದ್ದೇನೆ. ಈ ವಿಚಾರದಲ್ಲಿ ಎಸ್ಪಿ ಅವರಿಗೆ ಸ್ವತಂತ್ರ ಅಧಿಕಾರ ನೀಡಲಾಗಿದೆ ಎಂದರು.
ಸರ್ಕಾರದ ಕುಮ್ಮಕ್ಕಿನಿಂದ ಈ ಘಟನೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಮಧು ಬಂಗಾರಪ್ಪ, ಬಿಜೆಪಿ ಹೇಳಿಕೆ ಖಂಡಿಸುತ್ತೇನೆ. ತಪ್ಪು ಮಾಡಿದಾಗ ಶಿಕ್ಷೆ ಕೊಡೋಕೆ ಕಾನೂನು ಇದೆ ಎಂದು ತಿಳಿಸಿದರು.
Key words: Pro–Pakistani, slogan, action, Minister, Madhu Bangarappa