Monday, September 14, 2026

BDA Apartments

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಮಾರ್ಕ್ಸ್ ಶೇ 33ಕ್ಕೆ ಇಳಿಕೆ BDA...
Home Front Page SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಮಾರ್ಕ್ಸ್ ಶೇ 33ಕ್ಕೆ ಇಳಿಕೆ

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಮಾರ್ಕ್ಸ್ ಶೇ 33ಕ್ಕೆ ಇಳಿಕೆ

ಬೆಂಗಳೂರು ,ಅಕ್ಟೋಬರ್,15,2025 (www.justkannada.in): ಎಸ್‌ ಎಸ್‌ ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು ಪಾಸಿಂಗ್ ಮಾರ್ಕ್ಸ್ ಅನ್ನು ಶೇ 33ಕ್ಕೆ ಇಳಿಕೆ ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, 2025-26ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ.33 ಕ್ಕೆ ಇಳಿಕೆ ಮಾಡಲಾಗುವುದು. ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಸ್ತುತ 625 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (219 ಅಂಕಗಳು) ಗಳಿಸುವುದು ಕಡ್ಡಾಯವಿತ್ತು. ಹೊಸ ನಿಯಮದ ಪ್ರಕಾರ, 625 ಅಂಕಗಳಿಗೆ ಕನಿಷ್ಟ 206 ಅಂಕ (ಶೇ. 33) ಗಳಿಸಿದರೆ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಪ್ರತಿ ವಿಷಯದಲ್ಲಿ ಕಡ್ಡಾಯವಾಗಿ ಕನಿಷ್ಠ 30 ಅಂಕ ಪಡೆಯಲೇಬೇಕು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Key words: SSLC, PUC, students, Passing marks, 33 percent, Minister Madhu Bangarappa