ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳ ಪ್ರಾರಂಭ: 3 ಸಾವಿರ ಕೋಟಿ ರೂ. ಮೀಸಲು- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಅಕ್ಟೋಬರ್,20,2025 (www.justkannada.in):  ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುವುದು. ಕರ್ನಾಟಕ ಪಬ್ಲಿಕ್ ಶಾಲೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನವೆಂಬರ್ ಎರಡನೇ ವಾರದಲ್ಲಿ ಕೆಪಿಎಸ್ ಶಾಲೆ ಆರಂಭಕ್ಕೆ ಶಿವಮೊಗ್ಗದಲ್ಲಿ ಸಿಎಂ ಗುದ್ದಲಿ ಪೂಜೆ ಮಾಡಲಿದ್ದಾರೆ, ಎಐ ಆಧಾರಿತ ಶಿಕ್ಷಣ ನೀಡಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈಗ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುವುದು. 6ನೇ ತರಗತಿಯಿಂದಲೇ ಸ್ಕಿಲ್​​​​ ಸ್ಕೂಲ್ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಜಾತಿ ಸಮೀಕ್ಷೆ ಶೇ.90.12ರಷ್ಟು ಆಗಿದೆ, ಸಮೀಕ್ಷೆ ಅಗತ್ಯ ತುಂಬಾ ಇದೆ. ಇದರಿಂದ ಬಜೆಟ್​​ ಗೆ ಅನುಕೂಲವಾಗಲಿದೆ. ಎಲ್ಲರೂ ಸಹ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಶಿವಮೊಗ್ಗದಲ್ಲಿ ಜಿಲ್ಲೆಯಲ್ಲಿ ಶೇ. 97 ರಷ್ಟು ಸಮೀಕ್ಷೆ ಮುಕ್ತಾಯವಾಗಿದೆ. ನಿನ್ನೆಗೆ ಶಿಕ್ಷಕರನ್ನು ಸಮೀಕ್ಷೆಗೆ ಬಳಸುವುದನ್ನು ನಿಲ್ಲಿಸಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

Key words: 800 KPS schools, open, Minister, Madhu Bangarappa