ಬೆಂಗಳೂರು,ನವೆಂಬರ್,1,2025 (www.justkannada.in): ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಳಾಗಿದೆ. ರಾಜ್ಯದಲ್ಲಿ 800 ಪಬ್ಲಿಕ್ ಶಾಲೆಗಳನ್ನ ಆರಂಭಸಲು ನಿರ್ಧಾರ ಮಾಡಲಾಗಿದೆ. ಗಡಿಭಾಗದ ಕನ್ನಡ ಶಾಲೆಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಶಿಕ್ಷಕರ ನೇಮಕಾತಿ
ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಶಿಕ್ಷಕರ ನೇಮಕಾತಿಗೆ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಶಿಕ್ಷಕರ ನೇಮಕಾತಿಗೆ ಒತ್ತು ನೀಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
Key words: Teacher recruitment, public schools, education, Minister, Madhu Bangarappa







