Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page 1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ...

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು 321.44 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಪಡಿಸಲಾಗಿದೆ. ಅಲ್ಲದೆ, 1,252  ಕೋಟಿ ರೂ. ಖರ್ಚು ಮಾಡಿ, 8,355 ಹೊಸ  ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.

ರಾಜ್ಯದ ಯಾವುದೇ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎಂದಾದರೆ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇಲಾಖೆಯ ಬಿಇಒ, ಡಿಡಿಪಿಐ ಮತ್ತಿತರ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ  ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಸದಸ್ಯ ತಪ್ಪಣ್ಣಪ್ಪ ಕಮಕನೂರು ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಅಪಾಯಕಾರಿ ಸ್ಥಿತಿಯಲ್ಲಿರುವ ಶಾಲೆಗಳ ಕಟ್ಟಡದ ದುರಸ್ತಿಗೆ ತುರ್ತು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಕ್ಕಳು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿಗದಿತವಾಗಿ ಶಾಲೆಗಳ ಗುಣಮಟ್ಟದ ಬಗ್ಗೆ ವರದಿ ನೀಡುವಂತೆಯೂ ಸೂಚಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಸದನಕ್ಕೆ ಮಾಹಿತಿ ನೀಡಿದ್ದಾರೆ.

ಕಲ್ಬುರ್ಗಿ ಜಿಲ್ಲೆ ಸಂಗೋಳಗಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ತಾರಸಿಯ ಗಾರೆ ಕುಸಿದಿರುವುದು ಮತ್ತು ಕಲ್ಬುರ್ಗಿ ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನ ಚಾವಣಿ ಕುಸಿದಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈಗಾಲೇ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಸಚಿವ ಮಧು ಬಂಗಾರಪ್ಪ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

2026-27 ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 59 ಸರ್ಕಾರಿ ಶಾಲೆಗಳನ್ನು ದುರಸ್ತಿ ಪಡಿಸಲಾಗುತ್ತಿದೆ. ₹121.07 ಕೋಟಿ ವೆಚ್ಚದಲ್ಲಿ 55 ತರಗತಿ ಕೊಠಡಿಗಳ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

2024-25ನೇ ಸಾಲಿನಲ್ಲಿ 248 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 978 ತರಗತಿ ಕೂರಠಡಿಗಳ ದುರಸ್ತಿಗಾಗಿ ರೂ.30.21 ಕೋಟಿಗಳನ್ನು ಬಿಡುಗಡ ಮಾಡಲಾಗಿತ್ತು. 2024-25ನೇ ಸಾಲಿಗೆ 118 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ತಲಾ 01 ರಂತೆ ಒಟ್ಟು 118 ಶೌಚಾಲಯ ಬ್ಲಾಕ್‌ ನಿರ್ಮಾಣ ಮಾಡಲು ರೂ.10.00 ಕೋಟಿಗಳನ್ನು ಬಿಡುಗಡೆ ಮಾಡಲಾಗಿತ್ತು.252 ಕೋಟಿ ರೂ. ವೆಚ್ಚದಲ್ಲಿ 8 jk02_new jk02 new

2025-26ನೇ ಸಾಲಿನಲ್ಲಿ 117 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 266 ತರಗತಿ ಕೂಠಡಿ ನಿರ್ಮಾಣ ಮಾಡಲು ರೂ.75.98 ಕೋಟಿ , 96 ಸರ್ಕಾರಿ ಪದವಿ. ಪೂರ್ವ ಕಾಲೇಜುಗಳಿಗೆ 267 ತರಗತಿ ಕೂಠಡಿ ದುರಸ್ತಿಗಾಗಿ ರೂ 5.24 ಕೋಟಿ ಹಾಗೂ 67 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 123 ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕಾಗಿ 12.60 ಕೋಟಿ ಅನುದಾನಕ್ಕೆ ಮಂಜೂರಾತಿ ನೀಡಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಸದನಕ್ಕೆ ವಿವರಿಸಿದ್ದಾರೆ.

Key words: Minister, Madhu Bangarappa, repair, dilapidated, school, buildings.