Monday, September 7, 2026

BDA Apartments

Home Front Page ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ, ಬರದ ಬಗ್ಗೆ ಬಿಜೆಪಿ ಚರ್ಚೆ ಮಾಡಲಿ- ಸಚಿವ ಮಧು...

ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ, ಬರದ ಬಗ್ಗೆ ಬಿಜೆಪಿ ಚರ್ಚೆ ಮಾಡಲಿ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ,ಸೆಪ್ಟಂಬರ್,7,2026 (www.justkannada.in): ಸೆಪ್ಟಂಬರ್ 21 ರಿಂದ ಮೂರು ದಿನಗಳ ಕಾಲ ಕರೆದಿರುವ ವಿಶೇಷ ಅಧಿವೇಶನ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ  ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಸೆಪ್ಟಂಬರ್ 21, 22, 23 ರಂದು ವಿಶೇಷ ಅಧಿವೇಶನ ಕರೆದಿದ್ದಾರೆ.  ಕಸ್ತೂರಿ ರಂಗನ್ ವರದಿ ಮತ್ತು ಬರದ ವಿಚಾರ ಕುರಿತು ಚರ್ಚಿಸಲಾಗುತ್ತದೆ.  ಸಿಎಂ ಡಿಕೆ ಶಿವಕುಮಾರ್ ಐತಿಹಾಸಿಕ ತೀರ್ಮಾನವನ್ನ ತೆಗೆದುಕೊಂಡಿದ್ದಾರೆ ಎಂದರು.

ವಿಪಕ್ಷದವರು ಏನು ಚರ್ಚೆ ಮಾಡುತ್ತಾರೆ ಎಂದು ಕಾಯುತ್ತಿದ್ದೇನೆ.  ಕಸ್ತೂರಿ ರಂಗನ್ ವರದಿ, ಬರದ ಬಗ್ಗೆ ಬಿಜೆಪಿ ಚರ್ಚೆ ಮಾಡಲಿ ಎಂದು  ಸಚಿವ ಮಧು ಬಂಗಾರಪ್ಪ ತಿಳಿಸಿದರು.

Key words: Kasturi Rangan, report, special session, BJP, Minister, Madhu Bangarappa