ಮೈಸೂರು,ಅಕ್ಟೋಬರ್,14,2026 (www.justkannada.in): ರಾಜ್ಯದಲ್ಲಿ ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ತಮ್ಮ ಅವಧಿಯಲ್ಲಿ ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸುವ ಗುರಿಯಿದೆ ಎಂದರು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
16,000 teachers, Recruitment, end of this year, Minister, Madhu Bangarappa







