ನವದೆಹಲಿ,ಅಕ್ಟೋಬರ್,13,2026 (www.justkannada.in): ಎಸ್ ಸಿ ಮತ್ತು ಎಸ್ ಟಿಗೆ ಮೀಸಲಾತಿ ಪ್ರಮಾಣ ಏರಿಕೆ ಮಾಢಿ ಮೀಸಲಾತಿ ಪ್ರಮಾಣವನ್ನು ಶೇ. 50ರಿಂದ ಶೇ. 56ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರದ ಆದೇಶವನ್ನ ಹೈಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ, ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಚರ್ಚಿಸಲಾಗುವುದು ಎಂದಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ ಅವರು, ಮೀಸಲಾತಿ ಪ್ರಮಾಣವನ್ನು ಶೇ. 56ಕ್ಕೆ ಹೆಚ್ಚಿಸುವ ಪ್ರಸ್ತಾಪ ಜನಸಂಖ್ಯೆಯ ಆಧಾರದ ಮೇಲೆ ರೂಪಿಸಲಾಗಿತ್ತು. ಈ ಸಂಬಂಧ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಲಾಗಿತ್ತು. ಮೀಸಲಾತಿ ಪ್ರಮಾಣ ಶೇ. 50ರ ಮಿತಿಯನ್ನು ದಾಟಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶವನ್ನ ಹೈಕೋರ್ಟ್ ರದ್ದುಮಾಡಿದೆ. ಹೈಕೋರ್ಟ್ ಆದೇಶದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಸರ್ಕಾರ ಮುಂದಿನ ಕ್ರಮದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.
ವಸತಿ ಶಾಲೆಗಳ ತೀರ ಹಳೆಯದಾದ ಕಟ್ಟಡಗಳನ್ನ ಮರು ನಿರ್ಮಿಸಲಾಗುವುದು. ವಸತಿ ಶಾಲೆಗಳ ವಿದ್ಯಾರ್ಥಿಗಳು ಶೇ 86 ರಷ್ಟು ಉತ್ತೀರ್ಣರಾಗಿದ್ದಾರೆ. ಹಾಸ್ಟೆಲ್ ಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುವುದು ಎಂದರು.






