ಅಯೋಧ್ಯೆಯಲ್ಲಿ ಭೂಮಿಪೂಜೆ ಮಾಡುವ ಮೂಲಕ ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ ನಡೆದಿದ್ದಾರೆ-  ಸಚಿವ ನಾರಾಯಣಗೌಡ…

ಮಂಡ್ಯ ಅ,5,2020(www.justkannada.in):  ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೂಮಿಪೂಜೆ ಮಾಡಿ ಮಂದಿರ ನಿರ್ಮಾಣಕ್ಕೆ  ಚಾಲನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಪೌರಾಡಳಿತ, ರೇಷ್ಮೆ, ತೋಟಗಾರಿಕೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಕೆ.ಆರ್.ಪೇಟೆ ಪಟ್ಟಣದ ಅಗ್ರಹಾರ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿದರು.jk-logo-justkannada-logo

ಈ ವೇಳೆ ಮಾತನಾಡಿದ ಸಚಿವ ನಾರಾಯಣಗೌಡ, ಭಾರತ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ರಾಮಮಂದಿರದ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಭೂಮಿಪೂಜೆ ಮಾಡುವ ಮೂಲಕ ಕೊಟ್ಟಮಾತಿನಂತೆ ನಡೆಯುವ ಜೊತೆಗೆ ದೇಶದ ಬಹುಸಂಖ್ಯಾತ ಹಿಂದೂ ಜನರ ಭಾವನೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ. ದೇಶದ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಸಚಿವ ನಾರಾಯಣಗೌಡ ಅಭಿಮಾನದಿಂದ ಹೇಳಿದರು.

ಕೆ.ಆರ್.ಪೇಟೆ ತಾಲ್ಲೂಕಿನ ತೆಂಡೇಕೆರೆ, ಅಕ್ಕಿಹೆಬ್ಬಾಳು, ಬೂಕನಕೆರೆ ಮತ್ತು ಸಂತೇಬಾಚಹಳ್ಳಿ ಗ್ರಾಮಗಳಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣಕ್ಕೆ ರಾಜ್ಯ ಸರ್ಕಾರವು ಮಂಜೂರಾತಿ ನೀಡಿದ್ದು ಸಧ್ಯದಲ್ಲಿಯೇ ಬಸ್ ನಿಲ್ದಾಣದ ಕಾಮಗಾರಿ ಆರಂಭವಾಗಲಿದೆ.minister-narayanagowda-ayodhya-rama-mandir-k-r-pet-spacial-worship

ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ 33 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದು ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿಯೂ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ನಡೆಯುತ್ತಿವೆ. ಕೊರೋನಾ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳ ಅನುಷ್ಠಾನಕ್ಕೆ ತಡೆಯಾಗಿತ್ತು. ಪ್ರತೀ ಗ್ರಾಮಗಳಲ್ಲಿಯೂ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಮಾಡುತ್ತಿದ್ದೇನೆ. ಕೊರೊನಾ ನಡುವೆಯೂ ಅಭಿವೃದ್ಧಿ ಕಾಮಗಾರಿ ತ್ವರಿತಗತಿಯಲ್ಲಿ ನಡೆಯಲಿದೆ ಎಂದು ಸಚಿವರು ಹೇಳಿದರು. ಇದೆ ವೇಳೆ ಸಚಿವರು ಕೆಆರ್ ಪೇಟೆಯ ವಿವಿಧೆಡೆ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

Key words: minister- narayanagowda-ayodhya-rama mandir- k.r pet-spacial worship