ಬಿಜೆಪಿಯವರು ಗ್ಯಾರಂಟಿಗಳ ಲಾಭ ಪಡೆಯುತ್ತಿದ್ದರೂ ಕೂಡ ಟೀಕಿಸುತ್ತಿದ್ದಾರೆ- ಗೃಹ ಸಚಿವ ಪರಮೇಶ್ವರ್

ದಾವಣಗೆರೆ,ಜೂನ್,16,2025 (www.justkannada.in): ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದರೂ ಕೂಡ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆ ಸೀಮಿತವಲ್ಲ ಬಿಜೆಪಿಗರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರೇ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕಾರ್ಯ ಕುಂಠಿತವಾಗಿಲ್ಲ.  ಅಭಿವೃದ್ದಿ ಕಾರ್ಯಗಳಿಗೆ ಸಾವಿರಾರು ಕೋಟಿ ನೀಡಲಾಗುತ್ತಿದೆ. ಆದರೆ ವಿಪಕ್ಷಗಳು ಅನಗತ್ಯವಾಗಿ ಸರ್ಕಾರದ ವಿರುದ್ದ ಟೀಕೆ ಮಾಡುತ್ತಿವೆ ಎಂದು ಪರಮೇಶ್ವರ್ ವಾಗ್ದಾಳಿ ನಡೆಸಿದರು.vtu

Key words: BJP, criticizing, guarantees, Home Minister, Parameshwar