ಬೆಂಗಳೂರು,ನವೆಂಬರ್,4,2025 (www.justkannada.in): ಸಚಿವ ಸಂಪುಟದಿಂದ ಹಿರಿಯ ಸಚಿವರನ್ನ ಕೈ ಬಿಡುವ  ಬಗ್ಗೆ ಗೊತ್ತಿಲ್ಲ . ಈ ಬಗ್ಗೆ ಸಿಎಂ  ಸಿದ್ದರಾಮಯ್ಯ, ಹೈಕಮಾಂಡ್ ನಿರ್ಧರಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಾವೆಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬೆಲೆ ಕೊಡುತ್ತೇವೆ. ಸಿಎಂ ಕೂಡ ಹೈಕಮಾಂಡ್ ಹೇಳಿದ್ದು ಕೇಳುತ್ತೇವೆ ಎಂದಿದ್ದಾರೆ. ವರಿಷ್ಠರ ತೀರ್ಮಾನ ಪಾಲಿಸವರ ವಿರುದ್ದ ಕ್ರಮ ಆಗುತ್ತದೆ ಎಂದರು.
ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ವಿಚಾರ, ಪೊಲೀಸ್ ಸಿಬ್ಬಂದಿ ಅಗತ್ಯ ನೋಡಿಕೊಂಡು ವರ್ಗಾವಣೆ ಮಾಡ್ತಾರೆ. ನಮ್ಮ ಇಲಾಖೆ ಬಿಟ್ಟು ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ನಿಂತಿದೆ ಎಂದರು.
ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಜತೆ ಚರ್ಚೆ ಮಾಡಿದ್ದೇನೆ. ಕಬ್ಬಿಗೆ ಬೆಲೆ ನಿಗದಿ ಮಾಡಿ ಸಮಸ್ಯೆ ಬಗೆಹರಿಸಲು ತಿಳಿಸಿದ್ದೇನೆ. ಇಲ್ಲದಿದ್ದರೇ ಪೊಲೀಸರಿಗೆ ಪರಿಸ್ಥಿತಿ ನಿಭಾಯಿಸಲು ಕಷ್ಟ ಆಗುತ್ತೆ. ಆ ಭಾಗದ ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರೆ ಎಂದರು.
Key words: High command, decide, senior minister, removal , cabinet, Parameshwar
            






