Monday, September 21, 2026

BDA Apartments

ದರ್ಶನ್ ಗೆ ಜಾಮೀನು ಕೊಡಬಾರದೆಂದು ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕ್ತೇವೆ- ಗೃಹ...
Home Front Page ದರ್ಶನ್ ಗೆ ಜಾಮೀನು ಕೊಡಬಾರದೆಂದು ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕ್ತೇವೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ದರ್ಶನ್ ಗೆ ಜಾಮೀನು ಕೊಡಬಾರದೆಂದು ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕ್ತೇವೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ದರ್ಶನ್ ಗೆ ಜಾಮೀನು ಕೊಡಬಾರದೆಂದು ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕ್ತೇವೆ puliyogare...

ಮೈಸೂರು,ನವೆಂಬರ್,21,2024 (www.justkannada.in):  ನಟ ದರ್ಶನ್ ಚಿಕಿತ್ಸೆ ಮುಗಿದ ನಂತರ ಮತ್ತೆ ಜೈಲಿಗೆ ಹೋಗಬೇಕು. ದರ್ಶನ್ ಗೆ ಜಾಮೀನು ಕೊಡಬಾರದು ಎಂದು ಸುಪ್ರೀಂಕೋರ್ಟ್ ಅರ್ಜಿ ಹಾಕುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ನಟ ದರ್ಶನ್ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.  ದರ್ಶನ್ ‍ಗೆ  ಜಾಮೀನು ಕೊಡಬಾರದೆಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕ್ತೇವೆ. ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಮತ್ತಷ್ಟು ತನಿಖೆ ನಡೆಯುತ್ತಿದೆ.  ತನಿಖೆ ಪೂರ್ಣವಾದ ನಂತರ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ ಎಂದರು.

ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸದ ಬಗ್ಗೆ ನನಗೆ ಗೊತ್ತಿಲ್ಲ.  ಸಿಎಂ ಯಾವ ಕಾರಣಕ್ಕೆ ಹೋಗಿದ್ದಾರೆ ಗೊತ್ತಿಲ್ಲ ಸಹಕಾರ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ. ಸಂಪುಟ ಪುನರಚನೆ ಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.

Key words: Home Minister, Dr. G. Parameshwar, Supreme Court, bail, Darshan