ಪಕ್ಷದಲ್ಲಿ ಯಾರು ಎಷ್ಟೇ ಹಿರಿಯರಾದರೂ ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗಲೇಬೇಕು- ಮಾಜಿ ಸಿಎಂ ವೀರಪ್ಪ ಮೊಯ್ಲಿ.

ಮೈಸೂರು,ಮೇ,27,2023(www.justkannada.in): ಬಿ.ಕೆ.ಹರಿಪ್ರಸಾದ್ ಗೆ ಸಚಿವ ಸ್ಥಾನ ಸಿಗದಕ್ಕೆ ರಾಜೀನಾಮೆ  ನೀಡುವುದಾಗಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ವೀರಪ್ಪಮೊಯ್ಲಿ, ಬಿ.ಕೆ.ಹರಿಪ್ರಸಾದ್  ಅವರಿಗೆ ಹೇಳುವಂತಹದ್ದು ಏನೂ ಇಲ್ಲ. ಪಕ್ಷದಲ್ಲಿ ಯಾರು ಎಷ್ಟೇ ಹಿರಿಯರಾದರೂ ಹೈ ಕಮಾಂಡ್ ನಿರ್ಧಾರಕ್ಕೆ ತಲೆ ಬಾಗಲೇಬೇಕು ಎಂದು ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ವೀರಪ್ಪಮೊಯ್ಲಿ, ಗ್ಯಾರಂಟಿ ಯೋಜನೆ ಖಂಡಿತವಾಗಿ ಜಾರಿ ಆಗುತ್ತದೆ. ಈ ವಿಚಾರದಲ್ಲಿ ಯಾಕೆ ಇಷ್ಟು ಆತುರ. ಗ್ಯಾರಂಟಿ ಕೊಡೋದು ಪಕ್ಷ ಅಲ್ಲ, ಸರ್ಕಾರ. ಗ್ಯಾರಂಟಿ ಯೋಜನೆಗೆ ಒಂದಷ್ಟು ಮಾನದಂಡ ಇರುತ್ತವೆ. ಅವುಗಳನ್ನು ಫಿಕ್ಸ್ ಮಾಡಿ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಭರ್ತಿ ಸಚಿವ ಸಂಪುಟ ಇದೆ. ಸಿಎಂ‌, ಡಿಸಿಎಂ ಇದ್ದಾರೆ. ಪವರ್ ಶೇರಿಂಗ್ ಬಗ್ಗೆ ಈಗ ಯಾಕೆ ಚರ್ಚೆ‌. ರಾಜ್ಯದಲ್ಲಿ ಸುಭದ್ರ ಸರ್ಕಾರ ಇದೆ. ಉತ್ತಮ ಆಡಳಿತ ಕೊಡುತ್ತೇವೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ತಿಳಿಸಿದರು.

Key words: minister –position-BK Hariprasad-Former CM-Veerappa moily