ಕರಾವಳಿ ಕೋಮುವಾದ ಪ್ರಯೋಗ ಶಾಲೆಯ ಬ್ರಾಂಚ್ ಹಳೆ ಮೈಸೂರಿನಲ್ಲೂ ಓಪನ್ ಮಾಡಲು ಬಿಜೆಪಿ ಪ್ರಯತ್ನ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಸೆಪ್ಟಂಬರ್,9,2025 (www.justkannada.in):  ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಂತರ ಬಿಜೆಪಿಯಿಂದ ಮದ್ದೂರಿನಲ್ಲಿ ಪ್ರತಿಭಟನೆ ಸಂಬಂಧ ಟ್ವೀಟ್ ಮಾಡಿರುವ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ  ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಕರಾವಳಿಯಲ್ಲಿದ್ದ ತಮ್ಮ ಕೋಮುವಾದದ ಪ್ರಯೋಗ ಶಾಲೆಯ ಬ್ರಾಂಚನ್ನು ಹಳೆ ಮೈಸೂರು ಭಾಗದಲ್ಲೂ ಓಪನ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಉರಿಗೌಡ ನಂಜೇಗೌಡ ಪಾತ್ರಗಳ ಸೃಷ್ಟಿ. ಶ್ರೀರಂಗಪಟ್ಟಣದ ಕೋಮು ಸಂಘರ್ಷ, ಕೆರೆಗೋಡು ಧ್ವಜ ಗಲಾಟೆ, ನಾಗಮಂಗಲ ಗಲಾಟೆ, ಮದ್ದೂರು ಗಲಾಟೆ.

ಈ ಎಲ್ಲಾ ಘಟನೆಗಳ ಹಿಂದೆ ಬಿಜೆಪಿಯ ರಾಜಕೀಯ ಕಾರ್ಯಸೂಚಿ ಇದೆ, ಕರಾವಳಿಯಲ್ಲಿ ಹಾಕಿದ ವಿಷವನ್ನೇ ಹಳೆ ಮೈಸೂರು ಭಾಗಕ್ಕೂ ಹಾಕಲಾಗುತ್ತಿದೆ. ಬಿಜೆಪಿಯೊಂದಿಗೆ ಜೆಡಿಎಸ್ ಸೈದ್ದಂತಿಕ ಮೈತ್ರಿ ಮಾಡಿಕೊಂಡ ನಂತರ ಕೋಮು ಸಾಮರಸ್ಯಕ್ಕೆ ಹೆಸರಾಗಿದ್ದ ಮಂಡ್ಯ ಸುತ್ತಾ ಮುತ್ತ ಗಲಾಟೆಗಳು ಶುರುವಾಗಿವೆ. ಇದೆಲ್ಲದಕ್ಕೆ ಕಡಿವಾಣ ಹಾಕಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತದೆ. ಸಾಮರಸ್ಯ, ಸಹಬಾಳ್ವೆಯನ್ನು ಸ್ಥಾಪಿಸಲು ಸದಾ ಬದ್ದವಾಗಿದೆ ಎಂದು  ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Key words: BJP,  coastal, communal , school, branch, Mysore, Minister, Priyank kharge