ಭಾರೀ ಮಳೆ ನೆರ ಹಾವಳಿ: ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲ್ಬುರ್ಗಿ,ಸೆಪ್ಟಂಬರ್,27,2025 (www.justkannada.in): ಕಲ್ಬುರ್ಗಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕಿಸಿದರು.

ಬೆಣ್ಣತೊರಾ ನದಿಯ ನೀರಿನಿಂದ ಪ್ರವಾವಕ್ಕೀಡಾಗಿರುವ ಕಾಳಗಿ ತಾಲ್ಲೂಕಿನ ಕಣಸೂರು ಗ್ರಾಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಹಾಗೆಯೇ  ಹಳೆ ಹೆಬ್ಬಾಳ ಗ್ರಾಮದಲ್ಲಿ ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು  ಇಟ್ಟು ಬೇಡಿಕೆಗೆ ಸ್ಪಂದಿಸಿದ ಸಚಿವ ಪ್ರಿಯಾಂಕ್ ಖರ್ಗೆ ಮಳೆ ತುಸು ಕಡಿಮೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಉಪವಿಭಾಗಾಧಿಕಾರಿ ಸಾಹಿತ್ಯ ಆಲದಕಟ್ಟಿ ಅವರಿಗೆ ಸೂಚಿಸಿದರು.

Key words: Heavy rains, Minister, Priyank Kharge, visits, flood area