ಬೆಂಗಳೂರು ,ಅಕ್ಟೋಬರ್,16,2025 (www.justkannada.in): ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ವಿಧಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ದಿನೇಶ್ ನರಣಿ ಬಂಧಿತ ಆರೋಪಿ. ಲಾತೂರ್ ನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಕಲ್ಬುರ್ಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಂದು ರಾತ್ರಿ ವೇಳೆ ಆರೋಪಿಯನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನೆಲ್ಲೆ ಅವರಿಗೆ ಸಾಕಷ್ಟು ನಿರಂತರ ಬೆದರಿಕೆ ಕರೆಗಳು ಬಂದಿದ್ದವು. ಈ ಕುರಿತು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು. ಇದೀಗ ಆರೋಪಿಯ ಬಂಧನವಾಗಿದೆ.
Key words: threatened, Minister, Priyank Kharge, Accused, arrested