ಬೆಂಗಳೂರು,ಜನವರಿ,28,2026 (www.justkannada.in): ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿದ ವಿಚಾರ ಇದೀಗ ಸದನದ ಕಲಾಪದಲ್ಲಿ ಪ್ರಸ್ತಾಪವಾಗಿದೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ರಾಜ್ಯಪಾಲರಿಗೆ ಕೇಶವಕೃಪಾದಿಂದಲೇ ಫೋನ್ ಬರುತ್ತೆ ಎಂದು ಆರೋಪಿಸಿದರು.
ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಸುನೀಲ್ ಕುಮಾರ್ ಸೇರಿ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಹಾಗಾದ್ರೆ ಸರ್ಕಾರ ರಾಜ್ಯಪಾಲರ ಪೋನ್ ಟ್ಯಾಪಿಂಗ್ ಮಾಡುತ್ತಿದೆಯಾ ಎಂದು ಬಿಜೆಪಿ ಶಾಸಕರು ಸದನದಲ್ಲಿ ಕಿಡಿಕಾರಿದರು.
Key words: Governor, Keshav Kripa, Minister, Priyank Kharge, BJP







