ಕೇರಳ ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮೇ,9,2026 (www.justkannada.in):  ಕೇರಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕೇರಳದಲ್ಲಿ ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಅಂತಾ ಎಲ್ಲರೂ ಹೇಳಿದ್ದಾರೆ. ಹಾಗಿದ್ದ ಮೇಲೆ ಅಲ್ಲಿ ಕಗ್ಗಂಟು ಅನ್ನೋ ಮಾತೇ ಇರುವುದಿಲ್ಲ. ನಮ್ಮ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೆ  ಎಂದರು.

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಯುಡಿಎಫ್​​ ಕೂಟದ ಮುಂದಾಳು ಕಾಂಗ್ರೆಸ್ ಪಕ್ಷವು ಸಿಎಂ ಆಯ್ಕೆ ವಿಚಾರದಲ್ಲಿ ಕಸರತ್ತು ನಡೆಸುತ್ತಿದೆ. ವಿ.ಡಿ. ಸತೀಶನ್ ಅವರ ಹೆಸರು ಮುಂದಿನ ಸಿಎಂ ರೇಸ್​​ನ ಲ್ಲಿ ಮುಂಚೂಣಿಯಲ್ಲಿದೆ. ಇತ್ತ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಹೆಸರು ಕೂಡ ಸಿಎಂ ಸ್ಥಾನಕ್ಕೆ ಕೇಳಿ ಬರುತ್ತಿದೆ.  . ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಜೊತೆಗಿನ ನಂಟು, ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಅವರ ಬಹಿರಂಗ ಬೆಂಬಲವೂ ಅವರಿಗಿದೆ. ಇನ್ನೊಂದೆಡೆ ಪಕ್ಷದ ಇನ್ನೊಬ್ಬ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರು ಕೂಡ ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

Key words: no confusion, selection, Kerala CM, Minister, Priyank Kharge