Friday, August 21, 2026

BDA Apartments

Home Front Page ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆ ಬಗ್ಗೆ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ…

ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆ ಬಗ್ಗೆ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ…

ಬೆಂಗಳೂರು,ಡಿ,11,2019(www.justkannada.in):  ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 12 ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಬಿಜೆಪಿ ಸರ್ಕಾರ ಸುಭದ್ರಪಡಿಸಿಕೊಂಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಸಚಿವ ಸಂಪುಟ ರಚನೆ ವಿಸ್ತರಣೆ ಕಸರತ್ತು ನಡೆಸಬೇಕಿದೆ.

ಈ ನಡುವೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್, ಕೇವಲ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆಯೇ ವಿನಹ, ಸಂಪುಟ ಪುನರ್ ರಚನೆ ಇಲ್ಲ. ಹಾಲಿ ಇರುವ ಖಾತೆಗಳಲ್ಲಿ ಯಾವುದೇ ಬದಲಾವಣೆ ಮಾಡಲ್ಲ.  ಹೆಚ್ಚುವರಿ ಖಾತೆಗಳನ್ನ ಹೊಸಬರಿಗೆ ನೀಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಸಿಎಂ ಬಿಎಸ್ ಯಡಿಯೂರಪ್ಪ ಶಾಸಕರಿಗೆ ನೀಡಿರುವ ಭರವಸೆಯನ್ನ ಈಡೇರಿಸುತ್ತಾರೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಆರ್.ಅಶೋಕ್ ತಿಳಿಸಿದರು.

Key words: Minister- R. Ashok- about- cabinet expansion