ಭಯೋತ್ಪಾದನೆ ವಿರುದ್ದ ‘ಆಪರೇಷನ್ ಸಿಂಧೂರ’ ಮುಂದುವರೆಯುತ್ತೆ- ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ,ಮೇ,8,2025 (www.justkannada.in):  ಭಯೋತ್ಪಾದನೆಯ ವಿರುದ್ಧ ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ಸೇನೆ ಶೌರ್ಯ ಮತ್ತು ಧೈರ್ಯವನ್ನು ಪ್ರದರ್ಶಿಸಿದೆ. ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಮುಂದುವರೆಯಲಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಹಲವು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ. ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಒಬ್ಬನೇ ಒಬ್ಬ ನಾಗರಿಕ ಮೃತಪಟ್ಟಿಲ್ಲ. ಸೇನೆ ನಿಖರವಾದ ಮತ್ತು ಊಹಿಸಲು ಅಸಾಧ್ಯವಾದ ಕೆಲಸವನ್ನು ಮಾಡಿದೆ ಎಂದು ತಿಳಿಸಿದರು.

ಭಾರತದ ತಾಳ್ಮೆಯನ್ನು ಪರೀಕ್ಷಿಸಬೇಡಿ, ಮತ್ತಷ್ಟು ದಾಳಿಗೆ ಭಾರತೀಯ ಸೇನೆ ಸಿದ್ಧವಿದೆ. ಭಾರತೀಯ ಸೇನೆಯ ಸಾಮರ್ಥ್ಯ ಮತ್ತೊಮ್ಮೆ ಸಾಬೀತಾಗಿದೆ. ಸೇನೆ ನಡೆಸಿದ ಕಾರ್ಯಾಚರಣೆ ಬಗ್ಗೆ ಹೆಮ್ಮೆಯಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.

Key words: ‘Operation Sindhura, continue, Union Defense Minister, Rajnath Singh