ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಪರ ವಿರೊಧ ಚರ್ಚೆಯಾಗುತ್ತಿದೆ. ತನಿಖೆಯ ನಂತರವಷ್ಟೆ ಸತ್ಯಾಂಶ ಹೊರಬರಲಿದೆ ಎಂದು ತಿಳಿಸಿದರು.
ಸದನದಲ್ಲಿ ಇಂದು ಪರಮೇಶ್ವರ ಮಾತನಾಡುತ್ತಾರೆ. ಈ ವಿಚಾರದಲ್ಲಿ ವೀರೆಂದ್ರ ಹೆಗಡೆ ಅವರನ್ನ ತರಲೇಬಾರದು. ದೂರುದಾರ ಹೇಳಿದ ಹಲವು ಕಡೆಗಳಲ್ಲಿ ಆಗೆದಾಗಿದೆ. ಆದರೆ ಏನೂ ಕುರುಹುಗಳು ಪತ್ತೆಯಾಗಿಲ್ಲ ಎಂದು ರಾಮಲಿಂಗರೆಡ್ಡಿ ತಿಳಿಸಿದರು.
Key words: BJP, politics , Dharmasthala issue, Minister, Ramalingareddy