ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ಹಾನಿಯಾಗುತ್ತೆ- ಸಚಿವ ರಾಮಲಿಂಗರೆಡ್ಡಿ

ರಾಮನಗರ, ಅಕ್ಟೋಬರ್,29,2025 (www.justkannada.in): ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ. ಸಿಎಂ ಬದಲಾವಣೆ ಬಗ್ಗೆ ಮಾತನಾಡಿದರೆ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ. ಬಿಜೆಪಿಯಲ್ಲಿ ಇರುವಷ್ಟು ಬಣ ನಮ್ಮಲ್ಲಿ ಇಲ್ಲ ಬಹಿರಂಗವಾಗಿ ಮಾತನಾಡದೆ 4 ಗೋಡೆ ಮಧ್ಯೆ ಮಾತನಾಡಲಿ ಪಕ್ಷದ ಹಿತದೃಷ್ಠಿಯಿಂದ ಏನು ಮಾತನಾಡದೇ ಇರುವುದು ಸೂಕ್ತ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ  ಎಂದರು.

ಆರ್ ಎಸ್ ಎಸ್ ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ತಡೆ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ, ಸರ್ಕಾರದ ಆದೇಶಕ್ಕೆ ಸರ್ಕ್ಯೂಲರ್ ಮೇಲೆ ಹೈಕೋರ್ಟ್ ಆದೇಶ ಮಾಡಿದೆ. ಸಿಎಂ ಕೂಡ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದಿದ್ದಾರೆ. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಆದೇಶ ಮಾಡಿದ್ದರು. ಇದು ಎಲ್ಲಾ ಪಕ್ಷಗಳು ಸಂಘಟಸಂಸ್ಥೆಗಳಿಗೆ ಅನ್ವಯ ಆಗುತ್ತದೆ ಎಂದು ತಿಳಿಸಿದರು.

Key words: Talking, changing, CM, Minister, Ramalingareddy