Saturday, August 15, 2026

BDA Apartments

Home Front Page KSRTC  ಬಸ್ ಗಳಿಗೆ  ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

KSRTC  ಬಸ್ ಗಳಿಗೆ  ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,30,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಈಗಾಗಲೇ ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಅಭಾವ ಉಂಟಾಗಿ ಹೋಟೆಲ್ ಉದ್ಯಮದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ  ಕೆಎಸ್ ಆರ್ ಟಿಸಿ ಬಸ್ ಗಳಿಗೂ ಡಿಸೇಲ್ ಸಮಸ್ಯೆಯಾಗಿದೆಯೇ..? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ತಕ್ಷಣಕ್ಕೆ ಯಾವುದೇ ಸಮಸ್ಯೆ ಇಲ್ಲ. ಸಾರಿಗೆ ಇಲಾಖೆಯ ನಾಲ್ಕು ನಿಗಮಕ್ಕೂ ಏನೂ ತೊಂದರೆ ಇಲ್ಲ ಎಂದರು.

ಕೆಎಸ್ ಆರ್ ಟಿಸಿ ಬಸ್ ಗಳಿಗೂ ಡಿಸೇಲ್ ಸಮಸ್ಯೆ ಇಲ್ಲ. ಯುದ್ದ ಹೀಗೆ ಮುಂದುವರೆದರೇ ಏನಾದರೂ ಸಮಸ್ಯೆ ಆಗಬಹುದು ತಕ್ಣಕ್ಕೆ ಯಾವುದೇ  ತೊಂದರೆಯಾಗಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದರು.

Key words: diesel, No problem, KSRTC buses, Minister, Ramalingareddy