Saturday, September 26, 2026

BDA Apartments

Home Front Page ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ ಇಂಜಿನಿಯರ್ ಗಳನ್ನು ವಾಪಸ್  ಮಾತೃ ಇಲಾಖೆಗೆ ವಾಪಸ್ ಕರೆಸಿ ಎಂದು  ಜಲಸಂಪನ್ಮೂಲ ಇಲಾಖೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ.

ಜಲಸಂಪನ್ಮೂಲ ಇಲಾಖೆ ಎಸಿಎಸ್ ಗೆ ಪತ್ರ ಬರೆದಿರುವ  ಸಚಿವ ರಾಮಲಿಂಗರೆಡ್ಡಿ, ಇಲಾಖೆಯಲ್ಲಿ ಇಂಜಿನಿಯರ್ ಗಳ ಕೊರತೆ ಹಿನ್ನೆಲೆಯಲ್ಲಿ ಬೇರೆ ಇಲಾಖೆಯಲ್ಲಿ ಕೆಲಸ ಮಾಡುವವರನ್ನ ವಾಪಸ್ ಮಾತೃ ಇಲಾಖೆಗೆ ಕರೆಸಿಕೊಳ್ಳುವಂತೆ  ಸೂಚನೆ ನೀಡಿದ್ದಾರೆ.

ಅಧೀಕ್ಷಕ ಅಭಿಯಂತರರು(SE), ಕಾರ್ಯಪಾಲಕ ಅಭಿಯಂತರರು(EE),  ಸಹಾಯಕ ಕಾರ್ಯಪಾಲಕ ಅಭಿಯಂತರು, ಸಹಾಯಕ ಅಭಿಯಂತರರು , ಕಿರಿಯ ಅಭಿಯಂತರರ ಹುದ್ದೆಗಳು ಖಾಲಿಯಿರುವುದರಿಂದ ಇಲಾಖೆಯಲ್ಲಿ ಅಭಿವೃದ್ದಿ ಕಾಮಗಾರಿ ಕುಂಠಿತವಾಗಿದೆ . ಮುಂದಿನ ದಿನಗಳಲ್ಲಿ ಜಲಸಂಪನ್ಮೂಲ ಇಲಾಖೆಯಿಂದ ಬೇರೆ ಬೇರೆ ಇಲಾಖೆಗೆ ನಿಯೋಜನೆ ಮಾಡಬಾರದು. ಅನ್ಯಪರ ಸೇವೆಯ ಮೇರೆಗ(ಒಒಡಿ) ವರ್ಗಾವಣೆ ಮಾಡದಂತೆ ಸೂಚಿಸಿದ್ದಾರೆ.ಸಚಿವ ರಾಮಲಿಂಗರೆಡ್ಡಿ ಸೂಚನೆ BDA JK_Adv BDA Adv

ಇಲಾಖೆ ಯೋಜನೆಗಳನ್ನ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು. ಒಒಡಿ ಮೇಲೆ 2 ವರ್ಷ ಅವಧಿ ಮೀರಿ ಬೇರೆ ಬೇರೆ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನ ಮಾತೃ ಇಲಾಖೆಗೆ ಕರೆಸಿ. ಜಲಸಂಪನ್ಮೂಲ ಇಲಾಖೆಗೆ ವಾಪಸ್ ಕರೆಸಿಕೊಳ್ಳಲು ಕ್ರಮ ಜರುಗಿಸಿ ಎಂದು  ಎಸಿಎಸ್ ಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

Key words: officers, serving, other departments, Minister Ramalingareddy