ಬೆಂಗಳೂರು,ಜುಲೈ,31,2026 (www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್ ಎಸ್ ಜಲಾಶಯದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಬಿಜೆಪಿ ಪ್ರತಿಭಟನೆ ಬಗ್ಗೆ ವ್ಯಂಗ್ಯವಾಡಿರುವ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ, ನಾವು ತಮಿಳುನಾಡಿಗೆ ನೀರು ಬಿಟ್ಟಿಲ್ಲ. ಆದರೂ ಬಿಜೆಪಿಯವರು ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಗೊತ್ತಿಲ್ಲ ಎಂದರು.
ನಾಳೆ ನಾವು ಸರ್ವಪಕ್ಷಗಳ ಸಭೆ ಕರೆದಿದ್ದೇವೆ. ಕಾವೇರಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಇರಬೇಕು ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
Key words: release, water, BJP is protest, Minister, Ramalingareddy






