ಸಾರಿಗೆ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ ಸಚಿವ ರಾಮಲಿಂಗರೆಡ್ಡಿ.  

ಬೆಂಗಳೂರು,ಸೆಪ್ಟಂಬರ್,6,2023(www.justkannada.in):   ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದು ಈ ಮೂಲಕ ಸಾರಿಗೆ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ,  ಈ ಬಾರಿ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ 17 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯ ಸಾರಿಗೆ ಇಲಾಖೆಯಿಂದ ಇನ್ನೂ ಎರಡ್ಮೂರು ತಿಂಗಳಲ್ಲಿ ಅಗ್ರಿಗೇಟರ್ ಆ್ಯಪ್ ಬಿಡುಗಡೆ ಮಾಡುತ್ತೇವೆ.  ಸಾರಿಗೆ ಅಭಿವೃದ್ದಿ ನಿಗಮ ಸ್ಥಾಪನೆಗೆ ಮನವಿ ಮಾಡಿದ್ದಾರೆ. ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಕೋರಿಕೆ  ಬಂದಿದೆ. ಹಣಕಾಸಿನ ವಿಚಾರ ಆಗಿರುವುದರಿಂದ ಮುಖ್ಯಮಂತ್ರಿಗಳು ನಿರ್ಧಾರ ಮಾಡುತ್ತಾರೆ ಎಂದರು.

ಸೆಪ್ಟಂಬರ್  11 ಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಬಂದ್ ಕರೆ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ,   ಬಂದ್ ಮಾಡುವವರು ಬೇಕಿದ್ದರೇ ಬಂದು ಮಾತನಾಡಲಿ. ಸಾರಿಗೆ ಕಚೇರಿ ಬಾಗಿಲು ಯಾವಾಗಲೂ ತೆರೆದಿರುತ್ತೆ. ಸಭೆ ಕರೆದಾಗ ಬಂದು‌ ಸಿಎಂ ಜೊತೆಗೆ ಮಾತನಾಡದೆ ಬಂದ್ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.

Key words: Minister -Ramalingareddy – good news – transport -staff.