ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ…

ಬೆಳಗಾವಿ,ಡಿಸೆಂಬರ್,26,2020(www.justkannada.in): ಉತ್ತರಾಯಣ ಕಾಲದಲ್ಲಿ ಎಲ್ಲ ಬದಲಾಗುತ್ತದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿರಾಕರಿಸಿದ್ದಾರೆ.Teachers,solve,problems,Government,bound,Minister,R.Ashok

ಈ ಸಂಬಂಧ ಮಾಧ್ಯಮದವರ ಜತೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ,  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಅವರ ವೈಯಕ್ತಿಕ. ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ  ಸಿಎಂ ಆಗಿ ಮುಂದುವರಿಯಲಿದ್ದಾರೆ. ಮೂರು ವರ್ಷವೂ ಅವರೇ ಸಿಎಂ ಆಗಿರುತ್ತಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.Minister Ramesh jarakiholi -statement -basanagowda Patil Yatnal – CM Change

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್  ಬಗ್ಗೆ ಮಾತನಾಡಬೇಡಿ ಎಂದು ನನ್ನ ಹಿತೈಷಿಗಳು ಹೇಳಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್  ಬಗ್ಗೆ ಮಾತನಾಡಬೇಡಿ ಎಂದು ವರಿಷ್ಟರು ಹೇಳಿಲ್ಲ.  ನಮ್ಮ ಪಕ್ಷದ  ಹೈಕಮಾಂಡ್ ಹೇಳುವಷ್ಟು ಮಟ್ಟಿಗೆ  ಆಕೆ ಏನು ದೊಡ್ಡ ಲೀಡರ್ ಅಲ್ಲ ಎಂದು ಟೀಕಿಸಿದರು.

Key words: Minister Ramesh jarakiholi -statement -basanagowda Patil Yatnal – CM Change