ಕುತೂಹಲ ಮೂಡಿಸಿದ ಜಾರಕಿಹೊಳಿ ಸಹೋದರರಿಂದ ಸಿಎಂ ಬಿಎಸ್ ವೈ ಭೇಟಿ…

ಬೆಂಗಳೂರು,ಫೆ,15,2020(www.justkannada.in): ಕಳೆದ ಮೂರು ದಿನಗಳ ಹಿಂದೆಯಷ್ಟೇ ನವದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜತೆ ಮಾತುಕತೆ ನಡೆಸಿದ್ದಾರೆ. ಮೊದಲು ಬಾಲಚಂದ್ರ ಜಾರಕಿಹೊಳಿ ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ. ನಂತರ ಸಚಿವ ರಮೇಶ್ ಜಾರಕಿಹೊಳಿ ಸಿಎಂ ನಿವಾಸಕ್ಕೆ ಆಗಮಿಸಿದ್ದು  ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡುವುದು ಸೇರಿದಂತೆ ಹಲವು ವಿಚಾರಗಳ ಕುರಿತಾಗಿ ಭೇಟಿಯ ವೇಳೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಎಂಎಸ್‌ಐಎಲ್ ನೀಡಲು ನಿರ್ಧರಿಸಿದ್ದರು. ಆದರೆ ಅದನ್ನ ನಿರಾಕರಿಸಿರುವ ಶಾಸಕ ಮಹೇಶ್ ಕುಮುಟಳ್ಳಿ,  ಬದಲಿಗೆ ಭೂಸೇನಾ ಅಭಿವೃದ್ಧಿ ನಿಗಮ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಬಿಜೆಪಿ ವರಿಷ್ಠರ ಭೇಟಿಯ ಬಳಿಕ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಸಿಎಂ ಬಿಎಸ್ ವೈ ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

Key words: minister –ramesh jarkiholi- balachandra jarkiholi- meets- CM BS yeddyurappa