ಉಡುಪಿ,ಅಕ್ಟೋಬರ್,10,2025 (www.justkannada.in): ಉದ್ಯೋಗಸ್ಥ ಮಹಿಳೆಯರಿಗೆ ಒಂದು ದಿನ ಋತುಚಕ್ರದ ರಜೆ ನೀಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು ಈ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕರ್ನಾಟಕ ಸರ್ಕಾರ ಒಮ್ಮತದಿಂದ ಈ ನಿರ್ಧಾರ ಕೈಗೊಂಡಿದೆ. ಬಹಳಷ್ಟು ಹೆಣ್ಣುಮಕ್ಕಳಿಗೆ ಇದರಿಂದ ಅನುಕೂಲವಾಗಲಿದೆ. ಬಡ, ಮಧ್ಯಮ ವರ್ಗದ ಮಹಿಳೆಯರಿಗೆ ಅನುಕೂಲವಾಗಲಿದೆ. ಮುಟ್ಟಿನ ಸಮಸ್ಯೆಯಿಂದ ಅನೇಕ ಮಹಿಳೆಯರು ಬಳಲುತಿದ್ದರು. ರಾಜ್ಯಾದ್ಯಂತ ಜನರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನಿಸಿದ್ದೇವೆ ಎಂದರು.
ಪರ ವಿರೋಧ ಏನೇ ಇದ್ದರೂ ಒಂದು ಪ್ರಗತಿಪರ ಬಿಲ್ ಇದಾಗಿದೆ. ಮಹಿಳೆಯರು 12 ತಿಂಗಳಲ್ಲಿ 12 ದಿನ ರಜೆ ಪಡೆಯಬಹುದು. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.
Key words: Menstrual leave, women, decision. Minister, Santosh Lad