ಕೆಲವರಿಗೆ ಪ್ರಚಾರದ ಹುಚ್ಚು ಎಂದ ಸಚಿವ ಸಾರಾ ಮಹೇಶ್: ನಟಿ ಹರ್ಷಿಕಾ ಪೂಣಚ್ಚ ವಿರುದ್ಧವೂ ಆಕ್ರೋಶ

0
331

ಮೈಸೂರು, ಜೂನ್16, 2019 (www.justkannada.in): ಕೊಡಗು ಸಂತ್ರಸ್ತರ ಮನೆಗಳ ಗುಣಮಟ್ಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ನಟಿ ಹರ್ಷಿಕಾ ಪೂಣಚ್ಚ ಹೇಳಿಕೆಗೆ ಸಚಿವ ಸಾ.ರಾ. ಮಹೇಶ್ ತಿರುಗೇಟು ನೀಡಿದ್ದಾರೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಹೇಶ್ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹರ್ಷಿಕಾ ಪೂರ್ಣಚ್ಚ ಅವರು ಯಾರು? ಈಗ ಏನಾಗಿದ್ದಾರೆ? ಅವರು ಸಿನಿಮಾದವರು ಅದರ ಬಗ್ಗೆ ಮಾತ್ರ ಮಾತನಾಡಬೇಕು ಎಂದು ಹೇಳಿದ್ದಾರೆ.

ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಅವರಿಗೆ ಏನು ಗೊತ್ತು? ವಾಸ್ತವ ಅರ್ಥಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು.ಕೊಡಗು ಜಿಲ್ಲಾ ಆಸ್ಪತ್ರೆ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಸಿಎಂ ಈಗಾಗಲೇ ಅನುದಾನ ಬಿಡುಗಡೆ ಮಾಡಿದ್ದು, ಟೆಂಡರ್ ಪ್ರಕ್ರಿಯೆ ನಡೆದಿದೆ. ಕೊಡಗು ಜಿಲ್ಲಾಸ್ಪತ್ರೆ ಅಭಿವೃದ್ಧಿಯಾಗುತ್ತಿದೆ. ಕೊಡಗು ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವಿಚಾರವಾಗಿ ಕೆಲವರಿಗೆ ಪ್ರಚಾರದ ಹುಚ್ಚು ಎಂದು ಸಚಿವರು ಹೇಳಿದ್ದಾರೆ.