ಬೆಂಗಳೂರು,ಜುಲೈ,10,2025 (www.justkannada.in): ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ, ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎನ್ನುವ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ಅಂತಿಮವಾಗಿ ಫುಲ್ ಸ್ಟಾಪ್ ಇಟ್ಟಿದ್ದಾರೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಪರ ಇದೀಗ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅವರು, ಸಿಎಂ ಹೇಳಿಕೆ ಅನಿವಾರ್ಯ ಇದೆ . ಈ ಸಮಯದಲ್ಲಿ ಸಿಎಂ ಹೇಳಿಕೆ ಸೂಕ್ತವಾಗಿದೆ. ಈಗಲಾದರೂ ಸಿಎಂ ಬದಲಾವಣೆ ಚರ್ಚೆ ನಿಲ್ಲಲಿ ಎಂದರು.
ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಇತಿಶ್ರಿ ಹಾಡಿದ್ದಾರೆ. ನಾಯಕತ್ವ ಬದಲಾವಣೆ ವದಂತಿಗೆ ತೆರೆ ಎಳೆದಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ನಿಲ್ಲಲಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
Key words: Leadership change,CM Siddaramaiah, minister, Sathish Jarakiholi