ಲೋಕಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ.

ಬೆಳಗಾವಿ,ಫೆಬ್ರವರಿ,24,2024(www.justkannada.in): ಲೋಕಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಲೋಕೋಪಯೋಗಿ ಸಚಿವ  ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದು, ಜಾರಕಿಹೊಳಿ ಕುಟುಂಬದ ಯಾರನ್ನೂ ಕಣಕ್ಕಿಳಿಸುವ ಯೋಚನೆ ಇಲ್ಲ ಎಂದಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ  ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ. ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್​​ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದಾರೆ. ಆದರೆ ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: Minister-Sathish Jarakiholi -clarified – competition – Lok Sabha elections.